ಬೆಳಗಾವಿ : ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಯ ನೇತೃತ್ವದಲ್ಲಿ ರಾಜ್ಯದಾದ್ಯಂತ ಎಲ್ಲ ತಾಲ್ಲೂಕು ಕಚೇರಿಗಳ ಮುಂದೆ ಇದೇ ಅಗಸ್ಟ್ 10 ರಂದು ‘ಕಾರ್ಪೊರೇಟ್ ಕಂಪನಿಗಳೇ ಕೃಷಿ ಬಿಟ್ಟು ತೊಲಗಿ’ ಎಂಬ ಘೋಷಣೆಯೊಂದಿಗೆ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಘಟಕದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇಡೀ ದೇಶವನ್ನೇ ಖಾಸಗಿ ಬಂಡವಾಳಗಾರರಿಗೆ, ಕಾರ್ಪೊರೇಟ್ ಕಂಪನಿಗಳಿಗೆ ಒತ್ತೆ ಇಟ್ಟು ದೇಶದ ಜನರನ್ನು ಮತ್ತೊಮ್ಮೆ ಗುಲಾಮಗಿರಿಗೆ ತಳ್ಳಲು ಎಲ್ಲಾ ಸಿದ್ಧತೆಗಳು ನಡೆದಿವೆ.
ವಿದ್ಯುತ್ ಕಾಯ್ದೆ , ಎಪಿಎಂಸಿ ಕಾಯ್ದೆ, ಭೂ ಸ್ವಾಧೀನ ಕಾಯ್ದೆ ರೈತರ ವಿರೋಧಿಯಾಗಿವೆ. ಸರ್ಕಾರದ ಲಾಭ ತರುವ ಕೈಗಾರಿಕೆಗಳು ಹಾಗೂ ಸೇವಾಕ್ಷೇತ್ರದ ಅನೇಕ ಸಂಸ್ಥೆಗಳ ಕಾರ್ಮಿಕ ಕಾಯ್ದೆ ದುರ್ಬಲಗೊಳಿಸಿ, ಕಂಪನಿಗಳಿಗೆ ಅಧಿಕಾರ ನೀಡಿದೆ.
ಸ್ವಾತಂತ್ರ ಭಾರತದ ಸಂವಿಧಾನವನ್ನು ನಾಶ ಮಾಡಿ ಕಾರ್ಪೊರೇಟ್ ಕಂಪನಿಗಳಿಗೆ ಬೇಕಾಗುವ ಸ್ವತಂತ್ರ ನೀಡಿ ಪ್ರಜಾಪ್ರಭುತ್ವದ ಅವನತಿಗೆ ಕಾರಣವಾಗುತ್ತಿರುವ ಈ ಸರ್ಕಾರಗಳ ವಿರುದ್ಧ ಹೋರಾಟಕ್ಕೆ ಮುಂದಾಗಬೇಕಾಗಿದೆ. ಆದ ಕಾರಣ ಇದೇ ತಿಂಗಳ ಅಗಸ್ಟ್ 10ರಂದು ಸೋಮವಾರ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
https://youtu.be/vdgpgJGtwhs