Breaking News

ಸಿಎಂ ಬಿಎಸ್​ವೈ ಮಗ ವಿಜಯೇಂದ್ರಗೆ ಕೊರೋನಾ ನೆಗೆಟಿವ್, ಮಗಳಿಗೆ ಪಾಸಿಟಿವ್

Spread the love

ಬೆಂಗಳೂರು (ಆ.3): ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪಗೆ ಕೊರೋನಾ ಪಾಸಿಟಿವ್​ ಬಂದ ಬೆನ್ನಲ್ಲೇ ಅವರ ಆಪ್ತ ವಲಯದಲ್ಲಿ ಆತಂಕ ಸೃಷ್ಟಿಯಾಗಿದೆ. ಕಳೆದ ಕೆಲ ದಿನಗಳಿಂದ ಅವರ ಸಂಪರ್ಕಕ್ಕೆ ಬಂದವರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಅಲ್ಲದೆ, ಅವರ ಸಂಪರ್ಕಕ್ಕೆ ಬಂದವರನ್ನು ಹೋಂ ಕ್ವಾರಂಟೈನ್​ ಕೂಡ ಮಾಡಲಾಗುತ್ತಿದೆ. ಈ ಮಧ್ಯೆ ಬಿಎಸ್​ವೈ ಮಗನಿಗೆ ಕೊರೋನಾ ನೆಗೆಟಿವ್​ ಬಂದರೆ, ಮಗಳಿಗೆ ಪಾಸಿಟಿವ್​ ಬಂದಿದೆ.

ಭಾನುವಾರ ಟ್ವೀಟ್​ ಮಾಡಿದ್ದ ಬಿಎಸ್​ವೈ ತಮಗೆ ಕೊರೋನಾ ಪಾಸಿಟಿವ್​ ಇರುವುದಾಗಿ ಹೇಳಿಕೊಂಡಿದ್ದರು. ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನ ಎಂದು ಹೇಳಿದ್ದರು.

ನಿನ್ನೆ ಕಾವೇರಿ ನಿವಾಸಲ್ಲಿರುವವರನ್ನು ಚೆಕ್ ಅಪ್ ಮಾಡುವ ವೇಳೆ ಕೊರೋನಾ ಟೆಸ್ಟ್ ಮಾಡಿಸಲಾಗಿದೆ. ಇದರಲ್ಲಿ ಬಿಎಸ್​​ವೈ ಹಾಗೂ ಅವರ ಪುತ್ರಿ ಪದ್ಮಾವತಿಗೆ ಪಾಸಿಟಿವ್ ಬಂದಿದೆ. ಸಿಎಂ ಹಾಗೂ ಪದ್ಮಾವತಿ ಅವರಿಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನು, ಸಿಎಂ ಮಗ ವಿಜಯೇಂದ್ರ ಮತ್ತು ಅವರ ಪಿಎಗೆ ನೆಗೆಟಿವ್ ಬಂದಿದೆ. ಸಿಎಂ ಒಎಸ್​ಡಿ ವಿಜಯ ಮಹಂತೇಶ್ ಅವರಿಗೂ ನೆಗೆಟಿವ್ ಬಂದಿದೆ. ಇನ್ನೂ ಕೆಲವರ ರಿಪೋರ್ಟ್ ಇವತ್ತು ಬರಬೇಕಿದೆ. ಸದ್ಯ, ವಿಜಯೇಂದ್ರ ಅವರು ಒಂದು ವಾರ ಸೆಲ್ಫ್ ಕ್ವಾರಂಟೈನ್​ನಲ್ಲಿ ಇರಲಿದ್ದಾರೆ.

ಸಿಎಂ ಟ್ರಾವೆಲ್​ ಹಿಸ್ಟರಿ:

ಸಿಎಂ ಬಿಎಸ್​ವೈ ಶುಕ್ರವಾರ ರಾಜ್ಯಪಾಲ ವಜುಭಾಯಿ ವಾಲ ಅವರನ್ನು ಭೇಟಿ ಯಾಗಿ ಮಾತುಕತೆ ನಡೆಸಿದ್ದರು. ಅದೇ ದಿನ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹಾಗೂ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್​ ಅವರನ್ನು ಯಡಿಯೂರಪ್ಪ ಭೇಟಿ ಮಾಡಿದ್ದರು.

ಇನ್ನು ಹೆಚ್ ಎಸ್ ಆರ್ ಲೇಔಟ್​​ನಲ್ಲಿ ನಡೆದ ಕಾರ್ಯಕ್ರಮಕ್ಕೂ ಸಿಎಂ ತೆರಳಿದ್ದರು. ಕಿಯೋನಿಕ್ಸ್ ವೇರ್ ಹೌಸಿಂಗ್ , ಇನ್ ಕ್ಯೂಬೇಷನ್ ಮತ್ತು ಸ್ಟಾರ್ಟಪ್ ಸಂಸ್ಥೆಗಳ ಸೌಲಭ್ಯಕ್ಕಾಗಿ ನಿರ್ಮಿಸಲಾದ ನೂತನ ಕಟ್ಟಡವನ್ನು ಅವರು ಉದ್ಘಾಟನೆ ಮಾಡಿದ್ದರು. ಅವರು ಅಂದು ಸಭೆಯನ್ನು ಉದ್ದೇಶಿಸಿ ಭಾಷಣ ಕೂಡ ಮಾಡಿದ್ದರು. ಅಂದು ಆ ಕಾರ್ಯಕ್ರಮಕ್ಕೆ ಕೆಲ ಗಣ್ಯರು ಕೂಡ ಭಾಗವಹಿಸಿದ್ದರು ಎನ್ನಲಾಗಿದೆ.

 

 


Spread the love

About Laxminews 24x7

Check Also

ಬಿಪಿಎಲ್ ಕಾರ್ಡುದಾರರಿಗೆ ಗುಡ್​ನ್ಯೂಸ್! ಕಾರ್ಡ್ ಮರುಸ್ಥಾಪನೆ ಕಾರ್ಯ ಬಹುತೇಕ ಪೂರ್ಣ, ಡಿಸೆಂಬರ್​ನಿಂದ ಸಿಗಲಿದೆ ರೇಷನ್

Spread the loveಬಿಪಿಎಲ್ ಕಾರ್ಡುದಾರರಿಗೆ ಗುಡ್​ನ್ಯೂಸ್! ಕಾರ್ಡ್ ಮರುಸ್ಥಾಪನೆ ಕಾರ್ಯ ಬಹುತೇಕ ಪೂರ್ಣ, ಡಿಸೆಂಬರ್​ನಿಂದ ಸಿಗಲಿದೆ ರೇಷನ್ ಬೆಂಗಳೂರು, ನವೆಂಬರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ