Breaking News

ಸೋಂಕಿನಿಂದ ಗುಣಮುಖ: ಬೆಳಗಾವಿಯಲ್ಲಿ ಯುವಕನಿಗೆ ಮಾಲೆ ಹಾಕಿ ಪಟಾಕಿ ಸಿಡಿಸಿ ಸ್ವಾಗತ

Spread the love

ಬೆಳಗಾವಿ: ಕೋವಿಡ್-19 ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾದ ಯುವಕನಿಗೆ ಮಾಲೆ ಹಾಕಿ, ಪಟಾಕಿ ಸಿಡಿಸಿ ಇಲ್ಲಿಯ ಖಡಕ್‌ ಗಲ್ಲಿಯಲ್ಲಿ ಸಂಭ್ರಮದಿಂದ ಸ್ವಾಗತಿಸಲಾಯಿತು.

ಆಸ್ಪತ್ರೆಯಿಂದ ಬಿಡುಗಡೆ ಆಗಿ ಬರುತ್ತಿದ್ದಂತೆ ಖಡಕ್ ಗಲ್ಲಿಯಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿತ್ತು. ಆಸ್ಪತ್ರೆಯಿಂದ ಬಿಡುಗಡೆಯಾಗಿ ಬರುತ್ತಿದ್ದಂತೆ ಪಟಾಕಿ ಸಿಡಿಸಿದ ಸ್ಥಳೀಯ ಯುವಕರು ಸಂಭ್ರಮಿಸಿದರು.

ಹತ್ತು ದಿನಗಳ ಹಿಂದೆ ಖಡಕ್ ಗಲ್ಲಿಯ 35 ವರ್ಷ ವಯಸ್ಸಿನ ಈ ವ್ಯಕ್ತಿಗೆ ಕೋವಿಡ್-19 ‌ಸೋಂಕು ವಕ್ಕರಿಸಿತ್ತು. ಇಲ್ಲಿನ ಕೋವಿಡ್ ವಾರ್ಡ್​​​​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಈತ‌ ನಿನ್ನೆ ಗುಣಮುಖನಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಖಡಕ್ ಗಲ್ಲಿಯಲ್ಲಿ ಹಾಕಿದ್ದ ಬ್ಯಾರಿಕೇಡ್ ಗೆ ರಿಬ್ಬನ್ ಕತ್ತರಿಸಿ ಒಳಗೆ ಪ್ರವೇಶ ನೀಡಲಾಯಿತು.  ಬಿಡುಗಡೆಯಾದ ಹಿನ್ನೆಲೆಯಲ್ಲಿ ಯುವಕನಿಗೆ ಮಾಲೆ ಹಾಕಿ ಪಟಾಕಿ ಸಿಡಿಸಿ ಸಂಭ್ರಮದಿಂದ ಸ್ವಾಗತಿಸಲಾಯಿತು. ಮನೆಗೆ ಯುವಕ ಆಗಮಿಸುತ್ತಿದ್ದಂತೆ ಕುಟುಂಬಸ್ಥರು ಆರತಿ ಬೆಳಗಿ, ದೃಷ್ಟಿ ತೆಗೆದು ಸ್ವಾಗತ ಮಾಡಿಕೊಂಡರು


Spread the love

About Laxminews 24x7

Check Also

ಮಂಡ್ಯದಲ್ಲಿ ಮೂರು ದಿನಗಳವರೆಗೆ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಕ್ತಾಯ

Spread the loveಮಂಡ್ಯ : ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ