Breaking News
Home / ಜಿಲ್ಲೆ / ಪಾಕಿಸ್ತಾನ ಪರ ಘೋಷಣೆ ಕೂಗಿದ ನಗರದ ಕೆಎಲïಇ ಇಂಜಿನಿಯರಿಂಗ್ ಕಾಲೇಜಿನ ಮೂವರು ವಿದ್ಯಾರ್ಥಿಗಳನ್ನು ಹಿಂಡಲಗಾ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ.

ಪಾಕಿಸ್ತಾನ ಪರ ಘೋಷಣೆ ಕೂಗಿದ ನಗರದ ಕೆಎಲïಇ ಇಂಜಿನಿಯರಿಂಗ್ ಕಾಲೇಜಿನ ಮೂವರು ವಿದ್ಯಾರ್ಥಿಗಳನ್ನು ಹಿಂಡಲಗಾ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ.

Spread the love

ಹುಬ್ಬಳ್ಳಿ,ಫೆ,18- ಪಾಕಿಸ್ತಾನ್ ಪರ ಘೊಷಣೆ ಕೂಗಿದ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ವಿರುದ್ಧದ ದೇಶದ್ರೋಹಿ ಕೃತ್ಯದ ಪ್ರಕರಣವನ್ನು ಹು-ಧಾ ಪೊಲೀಸ್ ಕಮಿಷನರೇಟ್‍ರವರು ಹುಬ್ಬಳ್ಳಿ ಗ್ರಾಮೀಣ ಠಾಣೆಗೆ ಹಸ್ತಾಂತರಿಸಿ ಕೈ ತೊಳೆದುಕೊಂಡಿದ್ದಾರೆ.ಖಾಸಗಿ ಇಂಜಿನಿಯರಿಂಗ್ ಕಾಲೇಜ್ ಪ್ರಾಂಶುಪಾಲರಿಂದ ಮಾಹಿತಿ ಬಂದ ಕೂಡಲೇ ಸ್ಥಳಕ್ಕೆ ತೆರಳಿ, ಆರೋಪಿತರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳುವವರೆಗೆ ಪೊಲೀಸ್ ಕಮಿಷನರೇಟ್ ಚುರುಕಿನಿಂದಲೇ ಕೆಲಸ ಮಾಡಿತ್ತು.

ಗುರುತರ ಆರೋಪದ ಪ್ರಕರಣದಲ್ಲಿ ಆರೋಪಿತರಿಂದ ಪೊಲೀಸ್ ಠಾಣೆಯಲ್ಲೇ ಬಾಂಡ್ ಪಡೆದು ಬಿಟ್ಟು ಕಳುಹಿಸಿದ್ದು ಭಾನುವಾರ ಭಾರಿ ಪ್ರತಿಭಟನೆಗೆ ಕಾರಣವಾಗಿತ್ತು. ಈ ಪ್ರಕರಣದಲ್ಲಿ ಪೊಲೀಸರು ಯಾರದ್ದೋ ಮರ್ಜಿಗೆ ಬಿದ್ದು ಕೆಲಸ ಮಾಡುತ್ತಿದ್ದಾರೆ. ದೇಶದ್ರೋಹಿಗಳನ್ನೇ ಬಿಟ್ಟು ಕಳಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು.

ಹೀಗಾಗಿ, ಪೇಚಿಗೆ ಸಿಲುಕಿದ್ದ ಪೊಲೀಸರು ಆರೋಪಿತ ಕಾಶ್ಮೀರಿ ವಿದ್ಯಾರ್ಥಿಗಳನ್ನು ಮತ್ತೆ ಬಂಧಿಸಿ ಕರೆತಂದು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.ಪ್ರಕರಣ ಬೆಳಕಿಗೆ ಬಂದಿದ್ದು ಗೋಕುಲ ರಸ್ತೆ ಠಾಣೆ ವ್ಯಾಪ್ತಿಯಲ್ಲಿರುವ ಬಿವಿಬಿ ಇಂಜಿನಿಯರಿಂಗ್ ಕಾಲೇಜ್‍ನಲ್ಲಿ. ಪ್ರಾಂಶುಪಾಲರು ದೂರು ನೀಡಿದ್ದು ಗೋಕುಲ ರಸ್ತೆ ಠಾಣೆಗೆ.

ಪ್ರಾಥಮಿಕ ವಿಚಾರಣೆಯಲ್ಲಿ- ಕಾಶ್ಮೀರಿ ವಿದ್ಯಾರ್ಥಿಗಳು ವಿಡಿಯೋ ಮಾಡಿದ್ದು ತಾಲೂಕಿನ ಕೊಟಗುಂಡಹುಣಸಿ ಗ್ರಾಮದಲ್ಲಿರುವ ವಸತಿ ನಿಲಯದಲ್ಲಿ ಎಂದು ಪೊಲೀಸರಿಗೆ ತಿಳಿದುಬಂದಿತ್ತು. ಆಗಲೇ ಪ್ರಕರಣವನ್ನು ಗ್ರಾಮೀಣ ಠಾಣೆಗೆ ವರ್ಗಾಯಿಸುವ ಚರ್ಚೆ ನಡೆದಿದೆ ಎಂದು ಹೇಳಲಾಗಿತ್ತು. ಯಾವುದೋ ಪ್ರಭಾವಕ್ಕೆ ಒಳಗಾಗಿ ವ್ಯತಿರಿಕ್ತ ತೀರ್ಮಾನ ತೆಗೆದುಕೊಂಡಿದ್ದ ಕಮಿಷನರೇಟ್ ಪೊಲೀಸರು, ಅದನ್ನು ಸರಿಪಡಿಸುವ ನಿಟ್ಟಿನಲ್ಲಿ ಆರೋಪಿತರನ್ನು ಪುನಃ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ, ಪ್ರಕರಣವನ್ನು ಹುಬ್ಬಳ್ಳಿ ಗ್ರಾಮೀಣ ಠಾಣೆಗೆ ಹಸ್ತಾಂತರಿಸಲು ಅನುಮತಿ ಪಡೆದು ಕ್ರಮ ಜರುಗಿಸಿದ್ದಾರೆ.

ಅಂತೂ ಪ್ರಕರಣ ಈಗ ಕಮಿಷನರೇಟ್ ವ್ಯಾಪ್ತಿಯಿಂದ ಧಾರವಾಡ ಜಿಲ್ಲಾ ಪೊಲೀಸ್ ವ್ಯಾಪ್ತಿಗೆ ಹೋಗಿದೆ. ಮುಂದಿನ ತನಿಖೆಯನ್ನು ಗ್ರಾಮೀಣ ಪೊಲೀಸರು ಎಸ್.ಪಿ ವರ್ತಿಕಾ ಕಟಿಯಾರ್ ಮಾರ್ಗದರ್ಶನದಲ್ಲಿ ನಡೆಸಲಿದ್ದಾರೆ.ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ ವೇಳೆ ಆರೋಪಿತ ಕಾಶ್ಮೀರಿ ವಿದ್ಯಾರ್ಥಿಗಳು, ನಿಮ್ಮ ಪರ ಯಾರಾದರೂ ವಕೀಲರು ಇದ್ದಾರೆಯೆ? ಯಾರನ್ನಾದರೂ ನೇಮಿಸಬೇಕೆ ಎಂಬ ನ್ಯಾಯಾಲಯದ ಪ್ರಶ್ನೆಗೆ ಈಗ ಯಾರೂ ವಕೀಲರು ಇಲ್ಲ.

ತಮ್ಮ ವಕೀಲರು ಬರಲಿದ್ದು ಸ್ವಲ್ಪ ಕಾಲಾವಕಾಶ ನೀಡಿ ಎಂದು ಕೇಳಿಕೊಂಡರು. ಅವರಿಗೆ ಮಾರ್ಚ್ 2ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈ ಮಧ್ಯೆ, ದೇಶದ್ರೋಹಿ ಘೊಷಣೆ ಕೂಗಿದವರ ವಿರುದ್ಧ ಯಾರೂ ವಕಾಲತ್ತು ವಹಿಸದಂತೆ ಹುಬ್ಬಳ್ಳಿ ವಕೀಲರ ಸಂಘ ತೀರ್ಮಾನ ತೆಗೆದುಕೊಂಡಿದೆ ಎಂದು ಪದಾಧಿಕಾರಿಗಳು ತಿಳಿಸಿದ್ದಾರೆ.

# ಜೀವ ಬೆದರಿಕೆ ಹಿನ್ನೆಲೆಯಲ್ಲಿ ಹಿಂಡಲಗಾ ಕಾರಾಗೃಹಕ್ಕೆ ಶಿಫ್ಟ್ :
ಹುಬ್ಬಳ್ಳಿ-ಫೆ,18- ಪಾಕಿಸ್ತಾನ ಪರ ಘೋಷಣೆ ಕೂಗಿದ ನಗರದ ಕೆಎಲïಇ ಇಂಜಿನಿಯರಿಂಗ್ ಕಾಲೇಜಿನ ಮೂವರು ವಿದ್ಯಾರ್ಥಿಗಳನ್ನು ಹಿಂಡಲಗಾ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ.
ನಿನ್ನೆ 3ನೇ ಜೆಎಂ ಎಫ್‍ಸಿ ಕೋರ್ಟ್‍ಗೆ ಹಾಜರು ಪಡಿಸಲಾಗಿತ್ತು. ಆಗ ಅರ್ಮಿ ,ಬಾಸಿತ್,ತಾಲಿಬ್ ಅವರನ್ನು ಮಾ. 2 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಬಳಿಕ ನಗರದ ಉಪಕಾರಾಗೃಹಕ್ಕೆ ಕಳುಹಿಸಿಕೊಡಲಾಗಿತ್ತು.

ಕಾರಾಗೃಹಕ್ಕೆ ಕಳುಹಿಸು ವಾಗ ಹಿಂದು ಪರ ಸಂಘಟನೆ ಕಾರ್ಯಕರ್ತರು ಆರೋಪಿಗಳ ಮೇಲೆ ಹಲ್ಲೆ ನಡೆಸಿದ್ದರು. ಹೀಗಾಗಿ ಜೈಲಿನಲ್ಲಿಯೂ ತಮ್ಮ ಮೇಲೆ ಹಲ್ಲೆ ನಡೆಯಬಹುದು ಎಂಬ ಆತಂಕದಿಂದ ರಾತ್ರಿ ಇಡೀ ನಿz್ದÉ ಮಾಡದೇ ಭಯದಿಂದ ಕುಳಿತುಕೊಂಡಿದ್ದರು ಎನ್ನಲಾಗಿದೆ.  ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಹುಬ್ಬಳ್ಳಿಯ ಉಪ ಕಾರಾಗೃಹ ದಿಂದ ಬೆಳಗಾವಿಯ ಹಿಂಡಲಗಾ ಕಾರಾಗೃಹಕ್ಕೆ ಆರೋಪಿಗಳನ್ನು ಶಿಫ್ಟ್ ಮಾಡಲಾಗಿದೆ


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ