Breaking News

ಸಂಬಳ ಕೊಟ್ಟಿಲ್ಲ ಎಂದು ಎಂದು ಆತ್ಮ ಹತ್ಯೆ ಮಾಡಿಕೊಳ್ಳಲು ಮುಂದಾದ ಕರೋನಾ ಸೋಂಕಿತ..

Spread the love

ಬೆಳಗಾವಿ: ಕೊರೊನಾ ಸೋಂಕಿತನೋರ್ವ ಆಸ್ಪತ್ರೆಯ ಕಟ್ಟಡ ಏರಿ ಆತ್ಮಹತ್ಯೆ  ಬೆದರಿಕೆ ಹಾಕಿರುವ ಘಟನೆ ಗೋಕಾಕ್ ತಾಲ್ಲೂಕಿನಲ್ಲಿ ನಡೆದಿದೆ.

ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಗುತ್ತಿಗೆ ಆದಾರದ ಮೇಲೆ ಕೆಲಸ ನಿರ್ವಹಿಸುತ್ತಿದ್ದ ಈತನಿಗೆ ಸೋಮವಾರ ಬೆಳಿಗ್ಗೆ ಕೊರೊನಾ ಪಾಸಿಟಿವ್ ಬಂದಿದೆ.

 

ಬಳಿಕ ಆಸ್ಪತ್ರೆ ಕಟ್ಟಡ ಏರಿ ಕಳೆದ 6 ತಿಂಗಳಿಂದ ವೇತನ ನೀಡಿಲ್ಲ. ಸುಮಾರು 40 ಜನರು ಕೆಲಸ ನಿರ್ವಹಿಸುತ್ತಿದ್ದೆವೆ.   ಎಲ್ಲ ಕುಟುಂಬಗಳು ಕೊರೊನಾ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿವೆ.  ಗುತ್ತಿಗೆ ಕಾರ್ಮಿಕರಿಗೆ ಯಾವುದೇ ರೀತಿಯ ಸೇವಾ ಭದ್ರತೆ ಇಲ್ಲ.

ಬಾಕಿ ಇರುವ ಆರು ತಿಂಗಳ ವೇತನ ಪಾವತಿ ಮಾಡುವಂತೆ ಆಗ್ರಹಿಸಿ ಆತ್ಮಹತ್ಯೆಯ ಬೆದರಿಕೆ ಹಾಕಿದ್ದಾನೆ. ಬಳಿಕ ಗುತ್ತಿಗೆ ಕಾರ್ಮಿಕರೂ ಆಸ್ಪತ್ರೆಯ ಆವರಣದಲ್ಲಿ ಧರಣಿ ನಡೆಸಿದ್ದಾರೆ.

 


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ