Breaking News

ಕೋವಿಡ್ ಸೋಂಕಿತ ಮೃತಪಟ್ಟು ಮೂರು ದಿನ ಕಳೆದರೂ ಮನೆಯವರಿಗೆ ಮಾಹಿತಿ ನೀಡಿಲ್ಲ

Spread the love

ಚಿಕ್ಕಬಳ್ಳಾಪುರ: ಕೋವಿಡ್ ಸೋಂಕಿತ ಮೃತಪಟ್ಟು ಮೂರು ದಿನ ಕಳೆದರೂ ಮನೆಯವರಿಗೆ ಮಾಹಿತಿ ನೀಡಿಲ್ಲ ಅಂತ ಮೃತನ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಆಕಾಶ್ ಆಸ್ಪತ್ರೆಯಲ್ಲಿ ನಡೆದಿದೆ.

ಬೆಂಗಳೂರು ನಗರ ಕೆ.ಪಿ. ಆಗ್ರಹಾರದ 56 ವರ್ಷದ ವ್ಯಕ್ತಿಯೊಬ್ಬರು ಕೋವಿಡ್-19 ಸೋಂಕು ದೃಢಪಟ್ಟ ಹಿನ್ನೆಲೆ ಜುಲೈ 30 ರ ಸಂಜೆ ಗುರುವಾರದಂದು ದೇವನಹಳ್ಳಿಯ ಆಕಾಶ್ ಆಸ್ಪತ್ರೆಗೆ ಶಿಫ್ಟ್ ಆಗಿದ್ದರು. ಶುಕ್ರವಾರ ಬೆಳಗಿನ ಜಾವ ಸೋಂಕಿತ ಮೃತಪಟ್ಟಿದ್ದಾರೆ. ಆದರೆ ಈ ಮಾಹಿತಿಯನ್ನು ಆಸ್ಪತ್ರೆಯವರು ಸಂಬಂಧಿಕರಿಗೆ ನೀಡಿಲ್ಲ ಎಂದು ಹೇಳಲಾಗಿದೆ.ಆಗಸ್ಟ್ 02 ರಂದು ಭಾನುವಾರ ಸೋಂಕಿತ ವ್ಯಕ್ತಿಯನ್ನ ನೋಡಿಕೊಂಡು ಹೋಗುವ ಸಲುವಾಗಿ ಆಸ್ಪತ್ರೆ ಬಳಿ ಸಂಬಂಧಿಕರು ಬಂದಾಗ ಸೋಂಕಿತ ವ್ಯಕ್ತಿ ಸಾವನ್ನಪ್ಪಿರುವ ಮಾಹಿತಿ ಸಿಕ್ಕಿದೆ. ಇದರಿಂದ ಕಂಗಾಲಾದ ಕುಟುಂಬಸ್ಥರೆಲ್ಲರೂ ಅಗಸ್ಟ್ 03 ರಂದು ಆಸ್ಪತ್ರೆ ಬಳಿ ಜಮಾಯಿಸಿ ಮೃತದೇಹ ತೋರಿಸುವಂತೆ ಬೆಳಗ್ಗೆಯಿಂದ ಕಾದ್ರೆ ಮಧ್ಯಾಹ್ನ 3 ಗಂಟೆಗೆ ತೋರಿಸಿದ್ದಾರೆ. ಮೂರು ದಿನ ಕಳೆದರೂ ನಮಗ್ಯಾಕೆ ಮಾಹಿತಿ ಕೊಡಲಿಲ್ಲ ಅಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೋಂಕಿತ ಸಾವನ್ನಪ್ಪಿ ಮೂರು ದಿನ ಆಗಿದ್ದರಿಂದ ಮೃತದೇಹ ಕೊಳೆತ ಸ್ಥಿತಿಯಲ್ಲಿರೋದನ್ನು ನೋಡಿ ಕುಟುಂಬಸ್ಥರು ಕಣ್ಣೀರಿಟ್ಟಿದ್ದಾರೆ. ಶವಗಳನ್ನು ಸರಿಯಾಗಿ ಶಿಥೀಲಿಕರಣ ವ್ಯವಸ್ಥೆಯಲ್ಲಿಡದ ಹಿನ್ನೆಲೆ ವ್ಯಕ್ತಿಯ ಶವ ಕೊಳೆಯುವ ಸ್ಥಿತಿಯಲ್ಲಿದೆ. ಮೃತ ಸೋಂಕಿತ ಕೈ ಮೇಲೆ ಡಾ.ರಾಜ್‍ಕುಮಾರ್ ಹಚ್ಚೆ ಹಾಕಿಸಿಕೊಂಡಿದ್ದರು. ಕುಟುಂಬಸ್ಥರು ಹೆಚ್ಚೆ ನೋಡಿ ಶವವನ್ನ ಗುರುತಿಸಿದ್ದಾರೆ.


Spread the love

About Laxminews 24x7

Check Also

ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಕುಸಿದ ಲಿಫ್ಟ್‌ – ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವು

Spread the loveಮಂಗಳೂರು: ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಲಿಫ್ಟ್‌ ಕುಸಿದು ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ  ಕುಂಟಿಕಾನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ