Breaking News

ರಾಮಮಂದಿರ ನಿರ್ಮಾಣದ ಭೂಮಿ ಪೂಜೆ ಸಮಾರಂಭದಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯಾಡಳಿತ ಪಾಲ್ಗೊಳ್ಳುವುದು ಸಂವಿಧಾನದ ಉಲ್ಲಂಘನೆ: ಎಂದು  ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ

Spread the love

ಹೊಸದಿಲ್ಲಿ: ಅಯ್ಯೋಧ್ಯೆಯ ರಾಮಮಂದಿರ ನಿರ್ಮಾಣದ ಭೂಮಿ ಪೂಜೆ ಸಮಾರಂಭದಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯಾಡಳಿತ ಪಾಲ್ಗೊಳ್ಳುವುದು ಸಂವಿಧಾನದ ಉಲ್ಲಂಘನೆ ಜತೆಗೆ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧದ ನಡೆಯಾಗಲಿದೆ ಎಂದು  ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸ್‌ವಾದಿ (ಸಿಪಿಎಂ) ಸೋಮವಾರ ಹೇಳಿದೆ.

ಅಯೋಧ್ಯೆಯಲ್ಲಿ ರಾಮಮಂದಿರ ದೇವಾಲಯದ ನಿರ್ಮಾಣವು ಟ್ರಸ್ಟ್ ನಿಂದ ಆಗಬೇಕೆಂದು ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿದೆ. ಆದ ಕಾರಣ ಭೂಮಿ ಪೂಜೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಂತಹ ಸರ್ಕಾರದ ಉನ್ನತ ಸ್ಥಾನದ ವ್ಯಕ್ತಿಗಳು ಭೂಮಿಪೂಜೆ ಕಾರ್ಯಕ್ರಮದಲ್ಲಿ ಭಾಗಿಯಾಗುವುದು ಸುಪ್ರೀಂ ಕೋರ್ಟ್ ಮತ್ತು ಸಂವಿಧಾನದ ತತ್ವಕ್ಕೆ ವಿರುದ್ಧವಾಗಲಿದೆ  ಪ್ರಕಟಣೆಯಲ್ಲಿ ಹೇಳಲಾಗಿದೆ.

1992 ರ ಡಿಸೆಂಬರ್ 6 ರಂದು ನಡೆದ ಬಾಬರಿ ಮಸೀದಿ ಧ್ವಂಸ ಘಟನೆಯನ್ನು ಅಪರಾಧ ಎಂದು ಸುಪ್ರೀಂಕೋರ್ಟ್ ತೀರ್ಪಿನಲ್ಲಿ ಹೇಳಿದ್ದರೂ, ಕೇಂದ್ರ ಸರ್ಕಾರ ಈವರೆಗೆ ಅಪರಾಧಿಗಳಿಗೆ ಶಿಕ್ಷೆ ನೀಡುವ ಬದಲು ಧ್ವಂಸಕ್ಕೆ ಕಾನೂನು ಪಾವಿತ್ರ್ಯತೆ ನೀಡುವಂತೆ ವರ್ತಿಸಿದೆ ಎಂದು ಸಿಪಿಎಂ ವಿಷಾಧಿಸಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ