Breaking News

ಸೋಂಕಿತರ ಸಂಖ್ಯೆ ಇಳಿಮುಖ – ಗುಣಮುಖರ ಸಂಖ್ಯೆ ಹೆಚ್ಚಳ

Spread the love

ಬಳ್ಳಾರಿ: ಜಿಲ್ಲೆಯಲ್ಲಿಂದು ಹೊಸದಾಗಿ 268 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಇದರಿಂದ ಸೋಂಕಿತರ ಸಂಖ್ಯೆ 7,530ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಇಂದು ಒಂದೇ ದಿನ 268 ಮಂದಿಗೆ ಮಹಾಮಾರಿ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಹೀಗಾಗಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 7,530ಕ್ಕೇರಿಕೆಯಾಗಿದೆ. ಕಳೆದ ಒಂದು ವಾರಕ್ಕೆ ಹೋಲಿಕೆ ಮಾಡಿದರೆ ಎರಡು ದಿನಗಳಿಂದ ಸೋಂಕಿನ ಪ್ರಮಾಣದಲ್ಲಿ ಕಡಿಮೆ ಆಗಿದೆ.ಅಲ್ಲದೇ 4,022 ಮಂದಿ ಈವರೆಗೂ ಗುಣಮುಖರಾಗಿ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೂ ಕೊರೊನಾ ಸೋಂಕಿಗೆ ಜಿಲ್ಲೆಯಲ್ಲಿ 101 ಮಂದಿ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ 3,407 ಸಕ್ರಿಯ ಪ್ರಕರಣಗಳಿವೆ. ಈ ದಿನ ಯಾವುದೇ ಸಾವು ಸಂಭವಿಸಿಲ್ಲ. ಅಂದಾಜು 483 ಮಂದಿ ಇಂದು ಒಂದೇ ದಿನ ಗುಣಮುಖರಾಗಿ ಜಿಲ್ಲಾ ಕೋವಿಡ್ 19 ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.


Spread the love

About Laxminews 24x7

Check Also

ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಯನ್ನು ಕೊಲೆಗೈದು ಪರಾರಿಯಾಗಿದ್ದ ಬಾಲಕ ಕೊನೆಗೂ ಅರೆಸ್ಟ್‌

Spread the loveಬಳ್ಳಾರಿ: ಖಾಸಗಿ ಶಾಲಾ ಹಾಸ್ಟೆಲ್‌ನಲ್ಲಿ ಹಲ್ಲೆ ಮಾಡಿ ನಾಪತ್ತೆಯಾಗಿದ್ದ ಬಾಲಕನನ್ನು ಪೊಲೀಸರು  ಕೊನೆಗೂ ಪತ್ತೆ ಹಚ್ಚಿದ್ದಾರೆ. ಮೊನ್ನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ