ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸ್ಥಿತಿ ಸ್ಥಿರವಾಗಿದೆ ಮತ್ತು ಪ್ರಸ್ತುತ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.
“ಪ್ರಸ್ತುತ ಅವರಿಗೆ ಜ್ವರವಿಲ್ಲ ಮತ್ತು ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಸೂಕ್ತವಾದ ಚಿಕಿತ್ಸೆಯನ್ನು ಪ್ರಾರಂಭಿಸಲಾಗಿದೆ ಮತ್ತು ಅವರನ್ನು ನಮ್ಮ ತಜ್ಞರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಆಸ್ಪತ್ರೆಗೆ ಬಂದ ನಂತರ ಅವರ ಲಕ್ಷಣಗಳು ಸುಧಾರಿಸಿದೆ ಮತ್ತು ಪ್ರಸ್ತುತ ಅವರು ಆರಾಮವಾಗಿದ್ದಾರೆ” ಎಂದು ಮಣಿಪಾಲ್ ಆಸ್ಪತ್ರೆ ಆರೋಗ್ಯ ಬುಲೆಟಿನ್ ನಲ್ಲಿ ತಿಳಿಸಿದೆ.
ಆ. 4 ರಂದು ರಾತ್ರಿ 3 ಗಂಟೆಗೆ ಆಸ್ಪತ್ರೆಗೆ ದಾಖಲಾಗಿದ್ದ ಸಿದ್ಧರಾಮಯ್ಯ ಅವರಿಗೆ ಕೊರೋನಾ ಸೋಂಕು ಧೃಧಪಟ್ಟಿದೆ.
Laxmi News 24×7