Breaking News

ಕೋವಿಡ್ ಕೇರ್ ಸೆಂಟರ್ ನಲ್ಲಿ ಇರಲು ಸಾಧ್ಯವಾಗುತ್ತಿಲ್ಲ ನಮ್ಮನ್ನ ಮನೆಗೆ ಬಿಡಿ

Spread the love

ರಾಯಚೂರು: ನಗರದ ಹೊರವಲಯದ ಯರಮರಸ್ ಬಳಿಯ ಕೋವಿಡ್ ಕೇರ್ ಸೆಂಟರ್ ನಲ್ಲಿ ವಿದ್ಯುತ್ ಸಮಸ್ಯೆ ಉಂಟಾಗಿದ್ದು ಕೊರೊನಾ ಸೊಂಕಿತರು ಕತ್ತಲಲ್ಲೇ ಕಾಲ ಕಳೆಯಬೇಕಾಗಿದೆ.

ವಿದ್ಯುತ್ ಇಲ್ಲದಿರುವುದರಿಂದ ನಾನಾ ಸಮಸ್ಯೆಗಳ ಕೊರೋನಾ ಸೋಂಕಿತರು ಎದುರಿಸುತ್ತಿದ್ದಾರೆ. ಮುಖ್ಯವಾಗಿ ನೀರಿನ ಸಮಸ್ಯೆ ಎದುರಾಗಿದ್ದು ಶೌಚಕ್ಕೂ ಹೋಗಲು ಆಗದೇ ಪರದಾಡುವಂತಾಗಿದೆ. ಸೊಳ್ಳೆ ಕಾಟದಿಂದ ನಿದ್ದೆ ಮಾಡಲು ಆಗದ ಪರಸ್ಥಿತಿಗೆ ಸೋಂಕಿತರು ಹೆದರಿದ್ದಾರೆ.

ನಿನ್ನೆಯಿಂದಲೂ ವಿದ್ಯುತ್ ಸಮಸ್ಯೆಯಿದ್ದು ಜೆಸ್ಕಾಂ ಅಧಿಕಾರಿಗಳು ಸರಿಯಾಗಿ ಸ್ಪಂದಿಸಿಲ್ಲ. ಹೀಗಾಗಿ ಇಲ್ಲಿ ಇರಲು ಸಾಧ್ಯವಾಗುತ್ತಿಲ್ಲ ನಮ್ಮನ್ನ ಮನೆಗೆ ಬಿಡಿ ಅಂತ ಸೋಂಕಿತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಕೋವಿಡ್ ಕೇರ್ ಸೆಂಟರ್ ನಲ್ಲಿ ಬಹುತೇಕರು ರೋಗ ಲಕ್ಷಣಗಳು ಇಲ್ಲದೇ ಇರುವವರು ಇದ್ದಾರೆ. ಜೆಸ್ಕಾಂ ಸಿಬ್ಬಂದಿ ಕೇಂದ್ರದ ಕಾಂಪೌಂಡ್ ಹತ್ತಿರಕ್ಕೂ ಬರುತ್ತಿಲ್ಲ. ಇಲ್ಲಿನ ವಿದ್ಯುತ್ ಕಂಬವನ್ನೂ ಪರಿಶೀಲಿಸುತ್ತಿಲ್ಲ ಅಂತ ಆರೋಪಿಸಿದ್ದಾರೆ. ಇನ್ನೂ ಅಧಿಕಾರಿಗಳು ಕೇರ್ ಸೆಂಟರ್ ನಲ್ಲಿರುವವರಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುತ್ತಿದ್ದೇವೆ. ವಿದ್ಯುತ್ ಗಾಗಿ ಜನರೇಟರ್ ಕಳುಹಿಸುತ್ತೇವೆ ಅಂತಿದ್ದಾರೆ. ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದ್ದು ಶೀಘ್ರದಲ್ಲಿ ವಿದ್ಯುತ್ ಸಮಸ್ಯೆ ಬಗೆಹರಿಸುತ್ತೇವೆ ಅಂತ ಭರವಸೆ ನೀಡಿದ್ದಾರೆ. ಆದ್ರೆ ಯಾವ ರೋಗ ಲಕ್ಷಣಗಳು ಇಲ್ಲದೆ ಸೊಳ್ಳೆ ಕಡಿಸಿಕೊಂಡು ಇಲ್ಲಿ ಕಾಲ ಕಳೆಯಬೇಕಾಗಿದೆ ಅಂತ ಬಹುತೇಕ ಸೋಂಕಿತರು ಅಸಮಧಾನ ವ್ಯಕ್ತಪಡಿಸಿದ್ದಾರೆ


Spread the love

About Laxminews 24x7

Check Also

ರಾಯಚೂರು : ಜಿಲ್ಲೆಯ ಸಿಂಧನೂರು ಸರ್ಕಾರಿ ಆಸ್ಪತ್ರೆಯಲ್ಲಿ ಶಿಶುಗಳ ಅದಲು ಬದಲಾದ ಆರೋಪ

Spread the loveರಾಯಚೂರು : ಜಿಲ್ಲೆಯ ಸಿಂಧನೂರು ಸರ್ಕಾರಿ ಆಸ್ಪತ್ರೆಯಲ್ಲಿ ಶನಿವಾರದಂದು ಇಬ್ಬರು ಮಹಿಳೆಯರಿಗೆ ಹೆರಿಗೆಯಾಗಿದ್ದು, ಇವೆರಡು ಮಕ್ಕಳನ್ನು ಸಿಬ್ಬಂದಿ ಅದಲು-ಬದಲು ಮಾಡಿದ್ದಾರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ