Breaking News

ಯತೀಂದ್ರ ಸಿದ್ದರಾಮಯ್ಯಗೂ ಕೊರೊನಾ ಪಾಸಿಟಿವ್

Spread the love

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿಕ ಇದೀಗ ಅವರ ಪುತ್ರ ಯತೀಂದ್ರರಿಗೂ ಕೊರೊನಾ ಪಾಸಿಟಿವ್ ದೃಢವಾಗಿದೆ. ಬಗ್ಗೆ ಟ್ವೀಟ್ ,ಆಡಿರುವ ಯತೀಂದ್ರ, ನನ್ನ ಕೊರೊನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಆಗಸ್ಟ್ 4ರಂದು ಸಿದ್ದರಾಮಯ್ಯ ಅವರಿಗೆ ಕೊರೊನಾ ಸೋಂಕು ಹರಡಿರುವುದು ದೃಢವಾಗಿದೆ. ಈ ಹಿನ್ನೆಲೆಯಲ್ಲಿ ಯಾವುದೇ ರೋಗ ಲಕ್ಷಣವಿಲ್ಲದಿದ್ದರೂ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದಕ್ಕೂ ಮುನ್ನ ಮುಖ್ಯಮಂತ್ರಿ ಯಡಿಯೂರಪ್ಪ ಅವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಅವರು ಕೂಡ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ