Breaking News

ವರುಣನ ಆರ್ಭಟದಿಂದ ಕೊರೊನಾ ನಿಯಂತ್ರಣವನ್ನು ಮರೆತುಬಿಡ್ತಾ ರಾಜ್ಯ ಸರ್ಕಾರ..?

Spread the love

ಬೆಂಗಳೂರು: ರಾಜ್ಯದ ನಾನಾ ಭಾಗಗಳಲ್ಲಿ ವ್ಯಾಪಕ ಮಳೆ ಹಾಗೂ ಪ್ರವಾಹ ಪರಿಸ್ಥಿತಿ ನಿರ್ಮಾಣ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೊರೊನಾ ಸೋಂಕಿನ ನಿಯಂತ್ರಣವನ್ನು ಮರೆತಂತಿದೆ. ಸೋಂಕಿನ ನಿಯಂತ್ರಣದಲ್ಲಿದ್ದ ರಾಜ್ಯ ಸರ್ಕಾರಕ್ಕೆ ಸದ್ಯ ಪ್ರವಾಹ ಮತ್ತೊಂದು ಹೊಡೆತವನ್ನು ನೀಡಿದೆ.

ರಾಜ್ಯದ ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಮೈಸೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಕೆಲವೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ, ಮೊದಲು ಜನ ಮತ್ತು ಜಾನುವಾರಗಳನ್ನು ರಕ್ಷಿಸುವುದು ಸರ್ಕಾರದ ಕೆಲಸವಾಗಿದ್ದು, ಸರ್ಕಾರ ಕೊರೊನಾ ನಿಯಂತ್ರವನ್ನು ಬದಿಗೊತ್ತಿ ಪ್ರವಾಹದತ್ತ ಗಮನಹರಿಸಿದೆ.

ಬೆಳಗಾವಿ ಜಿಲ್ಲೆಗೆ ನಾನಾ ಕಡೆಗಳಿಂದ ನೀರು ಹರಿದು ಬರುತ್ತಿದ್ದು, ಕೊಯ್ನಾ ಜಲಾಶಯದಿಂದ ಮತ್ತೆ ನಮ್ಮ ರಾಜ್ಯದ ಉತ್ತರ ಭಾಗಕ್ಕೆ ನೀರು ಹರಿದು ಬರುವ ಸಾಧ್ಯತೆಯಿದೆ.  ಹೀಗಾಗಿ ಮೊದಲು ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕಂದಾಯ ಸಚಿವರು ಸೇರಿದಂತೆ ಆಯಾ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕ್ಷೇತ್ರಗಳತ್ತ ಹೊರಡಲು ಸೂಚನೆ ನೀಡಿದ್ದಾರೆ. ಇನ್ನು ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಸಚಿವರು ಈಗಾಗಲೇ ಜಿಲ್ಲೆಗಳತ್ತ ತೆರಳಿದ್ದಾರೆ.


Spread the love

About Laxminews 24x7

Check Also

ಕ್ಷಮೆ ಕೇಳಲಿ, ಇಲ್ಲವೇ ಸಾರ್ವಜನಿಕರ ಪ್ರತಿಭಟನೆ ಎದುರಿಸಬೇಕಾದೀತು: ಸಚಿವೆ ಹೆಬ್ಬಾಳ್ಕರ್

Spread the loveಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ