Breaking News

ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ 9 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ.

Spread the love

ಕೊಡಗಿನಲ್ಲಿ ಈ ವರ್ಷವೂ ಪ್ರವಾಹದ ಭೀತಿ ಎದುರಾಗಿದ್ದು, ನಾಲ್ಕೈದು ದಿನ ಸುರಿದ ಮಳೆಗೆ ಕೊಡಗಿನ ಜನರು ಕಂಗಾಲಾಗಿದ್ದಾರೆ. ಹೀಗಾಗಿ, ಇಂದು ಬೆಳಗ್ಗೆಯಿಂದ ಆ. 11ರ ಬೆಳಗ್ಗೆಯವರೆಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಕೊಡಗಿನಲ್ಲಿ ನಾಲ್ಕೈದು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ನದಿಪಾತ್ರದ ಭಾಗದಲ್ಲಿ ಮತ್ತು ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಭಾಗಮಂಡಲದ ಬ್ರಹ್ಮಗಿರಿಯಲ್ಲಿ ಗುಡ್ಡವೇ ಕುಸಿದು, ತಲಕಾವೇರಿ ಅರ್ಚಕರ ಮನೆ, ಕುಟುಂಬ, ಹಸುಗಳು ಜಲಸಮಾಧಿಯಾಗಿವೆ.

ಎಸ್​ಡಿಆರ್​ಎಫ್​ ತಂಡಗಳು ಈಗಾಗಲೇ ಕೊಡಗಿನಲ್ಲಿ ಬೀಡುಬಿಟ್ಟಿದ್ದು, ಪ್ರವಾಹದ ಅನಾಹುತಗಳನ್ನು ತಪ್ಪಿಸಲು ಸಿದ್ಧವಾಗಿವೆ. ಪ್ರವಾಹ, ಭೂಕುಸಿತದಿಂದ ಕೊಡಗಿನಲ್ಲಿ 8 ಕಡೆ ರಸ್ತೆ ಸಂಚಾರ ಬಂದ್ ಆಗಿದೆ. ಒಟ್ಟು 566 ಜನರನ್ನು 9 ಪರಿಹಾರ ಕೇಂದ್ರಗಳಿಗೆ ಸ್ಥಳಾಂತರ ಮಾಡಲಾಗಿದೆ ಎಂದು ಕೊಡಗು ಜಿಲ್ಲಾಡಳಿತ ಅಧಿಕೃತ ಮಾಹಿತಿ ನೀಡಿದೆ.

ಭಾಗಮಂಡಲ ಬಳಿಯ ಬ್ರಹ್ಮಗಿರಿ ಬೆಟ್ಟದಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾದವರ ಶೋಧ ಕಾರ್ಯದ ಕಾರ್ಯಚರಣೆಯನ್ನು ನಿನ್ನೆ ಸ್ಥಗಿತಗೊಳಿಸಲಾಗಿತ್ತು. ನಿರಂತರ ಮಳೆಯಿಂದ ಕಾರ್ಯಚರಣೆಗೆ ಅಡ್ಡಿಯಾಗಿತ್ತು. ಹೀಗಾಗಿ, ಇಂದು ಕಾರ್ಯಾಚರಣೆ ಆರಂಭವಾಗುವ ಸಾಧ್ಯತೆಯಿದೆ. ತಲಕಾವೇರಿ ಅರ್ಚಕ ನಾರಾಯಣ ಆಚಾರ್ಯ ಅವರ ಕುಟುಂಬ ಗುಡ್ಡದ ಮಣ್ಣಿನಡಿ ಸಿಲುಕಿ 2 ದಿನಗಳು ಕಳೆದಿವೆ. ಹೀಗಾಗಿ, ಅವರು ಬದಕುಇರುವ ಸಾಧ್ಯತೆ ಕಡಿಮೆ. ಭಾಗಮಂಡಲ, ತಲಕಾವೇರಿ ಸುತ್ತಮುತ್ತ 170 ಮಿಲಿ ಮೀಟರ್ ಮಳೆ ಸುರಿಯುತ್ತಿದ್ದಂತೆ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆಯಾಗಿತ್ತು. ಗುರುವಾರ ಮುಂಜಾನೆ ಬೆಟ್ಟ ಕುಸಿದು ತಲಕಾವೇರಿಯ ಪ್ರಧಾನ ಅರ್ಚಕರಾದ ನಾರಾಯಣ ಆಚಾರ್ಯ ಮತ್ತು ಅವರ ಕುಟುಂಬದ ಐವರು ಕೊಚ್ಚಿಹೋಗಿದ್ದರು.


Spread the love

About Laxminews 24x7

Check Also

‘ಪಕ್ಷ ಭೇದ ಮರೆತು ಕೆಲಸ ಮಾಡಿದಾಗ ಮಾತ್ರ ಬೆಂಗಳೂರಿಗೆ ಸಮಾನಾಂತರವಾಗಿ ಬೆಳಗಾವಿ ಜಿಲ್ಲೆಯೂ ಬೆಳೆಯಲು ಸಾಧ್ಯ: ಸತೀಶ ಜಾರಕಿಹೊಳಿ

Spread the loveಬೆಳಗಾವಿ: ”ಪಕ್ಷ ಭೇದ ಮರೆತು ಕೆಲಸ ಮಾಡಿದಾಗ ಮಾತ್ರ ಬೆಂಗಳೂರಿಗೆ ಸಮಾನಾಂತರವಾಗಿ ಬೆಳಗಾವಿ ಜಿಲ್ಲೆಯೂ ಬೆಳೆಯಲು ಸಾಧ್ಯವಾಗುತ್ತದೆ” ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ