ಬೆಳಗಾವಿ: ಬಹುನಿರೀಕ್ಷಿತ ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ 30 ನೇ ಸ್ಥಾನ ಲಭಿಸಿದರೆ, ಬೆಳಗಾವಿ ಜಿಲ್ಲೆಗೆ 31 ನೇ ಸ್ಥಾನ ಪಡೆದಿದೆ.
ಕೊರೊನಾ ಸೋಂಕು ಭೀತಿಯ ಮಧ್ಯೆಯೂ ವಿದ್ಯಾರ್ಥಿಗಳು ಎಸ್ಎಸ್ ಎಲ್ ಸಿ ಪರೀಕ್ಷೆ ಎದುರಿಸಿದ್ದರು. ಚಿಕ್ಕೋಡಿಯ ಎಂ.ಕೆ. ಕವಟಗಿಮಠ ಕನ್ನಡ ಪ್ರೌಢಶಾಲೆಯ ವಿದ್ಯಾರ್ಥಿನಿ ಸಹನಾ ಶಂಕರ ಕಾಮಗೌಡರ, ಬೆಳಗಾವಿ ಶೈಕ್ಷಣಿಕ ಜಿಲ್ಲೆಯ ಘಟಪ್ರಭಾದ ಕೆ.ಆರ್. ಹುಕ್ಕೇರಿ ಪ್ರೌಢಶಾಲೆಯ ಶ್ರುತಿ ಬಸಗೌಡ ಪಾಟೀಲ 625ಕ್ಕೆ 623 ಅಂಕಗಳನ್ನು ಗಳಿಸಿ ಕನ್ನಡ ಮಾಧ್ಯಮದಲ್ಲಿ ರಾಜ್ಯದ ಟಾಪರ್‌ಗಳಾಗಿದ್ದಾರೆ.
ಬೈಲಹೊಂಗಲ ತಾಲೂಕಿನ ಉಡಿಕೇರಿಯ ಎಸ್.ಆರ್. ಪ್ರೌಢಶಾಲೆ ವಿದ್ಯಾರ್ಥಿ ವೀರಭದ್ರ ಕಲಭಾವಿ, ರಾಯಬಾಗ ತಾಲ್ಲೂಕಿನ ಹಾರೂಗೇರಿಯ ಪ್ರಗತಿ ಪ್ರೌಢಶಾಲೆಯ ದೀಪಾ ನಾಗನೂರ ತಲಾ 622 ಅಂಕ ಗಳಿಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಒಟ್ಟು 70,346 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ಕಳೆದ ಬಾರಿ 13 ಸ್ಥಾನದಲ್ಲಿದ್ದ ಚಿಕ್ಕೋಡಿ ಈ ಬಾರಿ 30 ನೇ ಸ್ಥಾನಕ್ಕೆ ತಲುಪಿದರೆ, 24 ನೇ ಸ್ಥಾನದಲ್ಲಿದ್ದ ಬೆಳಗಾವಿ 31 ಸ್ಥಾನ ಪಡೆದುಕೊಂಡಿದೆ.