Breaking News

ಚಿಕ್ಕೋಡಿ -ಸದಲಗಾ ಶಾಸಕ ಗಣೇಶ ಹುಕ್ಕೇರಿ ಮಂಗಳವಾರ ಸೋಲಾರ್ ಲ್ಯಾಂಪ್ ಹಾಗೂ ಸೋಲಾರ್ ವಾಟರ್ ಹೀಟರ್ ವಿತರಿಸಿದರು.

Spread the love

ಚಿಕ್ಕೋಡಿ  – ಚಿಕ್ಕೋಡಿ -ಸದಲಗಾ ಶಾಸಕ ಗಣೇಶ ಹುಕ್ಕೇರಿ ಮಂಗಳವಾರ ಸೋಲಾರ್ ಲ್ಯಾಂಪ್ ಹಾಗೂ ಸೋಲಾರ್ ವಾಟರ್ ಹೀಟರ್ ವಿತರಿಸಿದರು.
ಅರಣ್ಯ ಇಲಾಖೆಯ ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯ ಅಡಿಯಲ್ಲಿ ವಿಶೇಷ ಪ್ರಯತ್ನ ಮಾಡಿ ಗಣೇಶ ಹುಕ್ಕೇರಿ ಬಡ ಜನರಿಗೆ ಈ ಸೌಲಭ್ಯ ಕೊಡಿಸಿದ್ದಾರೆ.
ಸರಕಾರ ಯಾವುದೇ ಇರಲಿ, ಕ್ಷೇತ್ರದ ಜನರಿಗೆ ಎಲ್ಲ ರೀತಿಯ ಸೌಲಭ್ಯ ಕೊಡಿಸಲು ನಾನು ಮತ್ತು ಮಾಜಿ ಸಚಿವ ಪ್ರಕಾಶ ಹುಕ್ಕೇರಿ ನಿರಂತರವಾಗಿ ಪ್ರಯತ್ನ ಮಾಡುತ್ತಿದ್ದೇವೆ. ಜನರು ಇವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಗಣೇಶ ಹುಕ್ಕೇರಿ ಕರೆ ನೀಡಿದರು.
ಇಂದಿನ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಜನರು ಎಚ್ಚರಿಕೆಯಿಂದ ಬದುಕಬೇಕು. ಆರೋಗ್ಯ ಅತ್ಯಂತ ಮಹತ್ವದ್ದಾಗಿದ್ದು, ನಿಷ್ಕಾಳಜಿ ಮಾಡಬಾರದು. ಆದರೆ ಯಾವುದಕ್ಕೂ ಭಯಪಡುವ ಅಗತ್ಯವಿಲ್ಲ. ನಿಮ್ಮ ಜೊತೆಗೆ ನಾವಿದ್ದೇವೆ ಎಂದು ಶಾಸಕರು ಅಭಯ ನೀಡಿದರು. 
ಚಿಕ್ಕೋಡಿ – ಸದಲಗಾ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದೇವೆ. ಆದರೆ ಪ್ರಕೃತಿ ವಿಕೋಪಗಳಿಂದ ಕೆಲವೊಮ್ಮೆ ಹಿನ್ನಡೆ ಉಂಟಾಗುತ್ತಿದೆ. ಆದರೆ ಇದಕ್ಕೆಲ್ಲ ಧೈರ್ಯಗುಂದದೆ ಮುನ್ನಡೆಯಬೇಕಿದೆ. ಜನರ ಸಹಕಾರ ಹೀಗಿಯೇ ಇದ್ದರೆ ನಾವು ಇನ್ನಷ್ಟು ಸಾಧಿಸಲು ಸಾಧ್ಯ ಎಂದು ಗಣೇಶ ಹುಕ್ಕೇರಿ ಹೇಳಿದರು.
ಅರಣ್ಯ ಇಲಾಖೆಯ ಅಧಿಕಾರಿಗಳು, ಕಾರ್ಯಕರ್ತರು ಇದ್ದರು. 

Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ