Breaking News

ಪೊಲೀಸರಿಗೆ ಸಂಪೂರ್ಣ ಅಧಿಕಾರವನ್ನು ಕೊಟ್ಟಿದ್ದೇನೆ. ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತರುತ್ತಾರೆ

Spread the love

ಬೆಂಗಳೂರು: ಪುಲಿಕೇಶಿ ನಗರ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲೆ ಕಿಡಿಗೇಡಿಗಳ ದಾಳಿಯಾಗಿದೆ. ಸ್ಥಳೀಯ ಡಿಜೆ ಹಳ್ಳಿ ಪೊಲೀಸ್ ಠಾಣೆ ಮೇಲೆ ಕಿಡಿಗೇಡಿಗಳ ಮುತ್ತಿಗೆ ಹಾಕಿದ್ದು, ಪೊಲೀಸರ ಮೇಲೆ ಹಲ್ಲೆಗೆ ದುಷ್ಕರ್ಮಿಗಳು ಮುಂದಾಗಿದ್ದಾರೆ. ಈ ಬಗ್ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.ಪುಂಡರಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಡಿಜೆ ಹಳ್ಳಿ ವ್ಯಾಪ್ತಿಯಲ್ಲಿ ನಡೆದ ಪುಂಡಾಟಿಕೆ ಗಮನಕ್ಕೆ ಬಂದಿದೆ. ಬೆಂಕಿ ಹಚ್ಚುವುದು, ಗಲಾಟೆ ಕಾನೂನು ಬಾಹಿರ ಕೃತ್ಯ ನಡೆಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಹೆಚ್ಚುವರಿ ಪೊಲೀಸರನ್ನು ರವಾನೆ ಮಾಡಲಾಗಿದೆ. ಪೊಲೀಸರಿಗೆ ಸಂಪೂರ್ಣ ಅಧಿಕಾರವನ್ನು ಕೊಟ್ಟಿದ್ದೇನೆ.

ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತರುತ್ತಾರೆ ಎಂದರು. ತಪ್ಪು ಮಾಡಿದವರು ಎಷ್ಟೇ ದೊಡ್ಡವರಾಗಿದ್ದರೂ ಕಠಿಣ ಕ್ರಮ ಆಗಲಿದೆ ಎಂದು ಗೃಹ ಸಚಿವ ಬೊಮ್ಮಾಯಿ ಹೇಳಿದರು.

 

 


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ