Breaking News

ಯೂರಿಯಾ ವಿತರಣೆಗೆ ಆಗ್ರಹಿಸಿ ಪ್ರತಿಭಟನೆ

Spread the love

ಬೆಳಗಾವಿ: ಸವದತ್ತಿ ತಾಲ್ಲೂಕಿನ ಮುಗಳಿಹಾಳ ಗ್ರಾಮದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಸಮರ್ಪಕವಾಗಿ ಯೂರಿಯಾ ಗೊಬ್ಬರ ವಿತರಿಸುವಂತೆ ಆಗ್ರಹಿಸಿ ರೈತ ಕೃಷಿ ಕಾರ್ಮಿಕ ಸಂಘಟನೆ ನೇತೃತ್ವದಲ್ಲಿ ರೈತರು ಮಂಗಳವಾರ ಪ್ರತಿಭಟನೆ ನಡೆಸಿದರು.

‘ಸಂಘದಿಂದ ಅವಶ್ಯ ಪ್ರಮಾಣದಲ್ಲಿ ಯೂರಿಯಾ ನೀಡುತ್ತಿಲ್ಲ. ಇದರಿಂದ ತೊಂದರೆಯಾಗಿದೆ. ಇತರ ಗೊಬ್ಬರಗಳ ಬದಲಿಗೆ ಯೂರಿಯಾವನ್ನೇ ಕೊಡಬೇಕು’ ಎಂದು ಒತ್ತಾಯಿಸಿದರು.

ಸಂಘಟನೆಯ ಜಿಲ್ಲಾ ಸಂಚಾಲಕ ಲಕ್ಕಪ್ಪ ಬಿಜ್ಜನ್ನವರ, ರಾಜು ಗಾಣಗಿ, ವಿಠ್ಠಲ ದೊಡಗೌಡ್ರ, ಬಸಪ್ಪ ದಳವಾಯಿ, ಮಲ್ಲಪ್ಪ ದಳವಾಯಿ, ವಿಠ್ಠಲ ಗಣಿ, ಕಲ್ಲಪ್ಪ ಕಡೆಮನಿ, ರಾಮಣ್ಣ ಕೆಸರಡ್ಡಿ, ರಮೇಶ ಹಳ್ಳೂರ ಇದ್ದರು.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ