Breaking News

ಡಿ.ಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಅತ್ಯಂತ ಖಂಡನೀಯ:ಪ್ರಹ್ಲಾದ್ ಜೋಶಿ

Spread the love

ನವದೆಹಲಿ: ಬೆಂಗಳೂರಿನ ಡಿ.ಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಅತ್ಯಂತ ಖಂಡನೀಯ ಮತ್ತು ಇದೊಂದು ಪೂರ್ವ ನಿಯೋಜಿತ ದಾಳಿ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಕಲ್ಲಿದ್ದಲು ಖಾತೆ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಮಂಗಳವಾರ ರಾತ್ರಿ ಕಾವಲಬೈರಸಂದ್ರದಲ್ಲಿ ನಡೆದ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಮಾತನಾಡುತ್ತಾ ಘಟನೆಯನ್ನು ವಿರೋಧಿಸಿದರು. ಭಾವನೆಗಳಿಗೆ ಧಕ್ಕೆಯಾಗಿದ್ದರೆ ಕಾನೂನು ಅಡಿ ದೂರು ದಾಖಲಿಸಬೇಕಿತ್ತು ಆದರೆ ಕಾನೂನು ಕೈಗೆತ್ತಿಕೊಳ್ಳುವುದು ಸರಿಯಲ್ಲ ಎಂದರು.ಪೊಲೀಸ್ ಠಾಣೆಯಿಂದ ಹಿಡಿದು ಸರ್ಕಾರಿ ವಾಹನ ಹಾಗೂ ಬಡ ಜನರ ಆಸ್ತಿ-ಪಾಸ್ತಿ ನಷ್ಟವಾಗಿದೆ. ಎಲ್ಲದಕ್ಕೂ ಬೆಂಕಿ ಹಚ್ಚಿರುವುದು ಆಕ್ಷಮ್ಯ ಅಪರಾಧ. ಈ ಸಂಬಂಧ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಜೊತೆಗೆ ಮಾತನಾಡಿದ್ದೇನೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದೇನೆ. ಈಗ ತೆಗೆದುಕೊಳ್ಳುವ ಕ್ರಮ ಮುಂದಿನ ದಿನಗಳಲ್ಲಿ ಮಾದರಿಯಾಗಿರಬೇಕು ಹಾಗೇ ತಪ್ಪಿತಸ್ಥರಿಗೆ ಪಾಠಕಲಿಸುವಂತೆ ಮನವಿ ಮಾಡಿದ್ದೇನೆ ಎಂದರು.

ಧಾರ್ಮಿಕ ಮುಖಂಡರು ಕೂಡ ಈ ರೀತಿ ಘಟನೆಗಳನ್ನು ವಿರೋಧಿಸಬೇಕು ಆಗ ಮಾತ್ರವೇ ಸಮಾನತೆ ಮತ್ತು ಏಕತೆ ಕಾಪಡಲು ಸಾಧ್ಯ.ಪೊಲೀಸರು ಉತ್ತಮ ಕೆಲಸ ಮಾಡಿದ್ದು ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ ಎಂದು ಜೋಶಿ ಹೇಳಿದರು.


Spread the love

About Laxminews 24x7

Check Also

ಅರಭಾವಿ ಆಂಜನೇಯ ದೇವರ ಕಾರ್ತೀಕೋತ್ಸವದಲ್ಲಿ ಪಾಲ್ಗೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love  ಮೂಡಲಗಿ- ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಅರಭಾವಿ ಆಂಜನೇಯ ದೇವಸ್ಥಾನಕ್ಕೆ ತೆರಳಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ