ನವದೆಹಲಿ: ದೇಶದಲ್ಲಿ ಕೊರೊನಾ ರುದ್ರ ನರ್ತನ ಮುಂದುವರಿದಿದ್ದು, ಒಂದೇ ದಿನ 66,999 ಮಂದಿಗೆ ಸೋಂಕು ತಗುಲಿದ್ದು, 942 ಜನರನ್ನು ಮಹಾಮಾರಿ ಬಲಿ ಪಡೆದುಕೊಂಡಿದೆ.
ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 23,96.638ಕ್ಕೆ ಏರಿಕೆಯಾಗಿದ್ದು, ಸದ್ಯ 6,53,622 ಸಕ್ರಿಯ ಪ್ರಕರಣಗಳಿವೆ. ಇದುವರೆಗೂ 16,95,982 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, 47,033 ಸಾವುಗಳು ದಾಖಲಾಗಿವೆ. ಬುಧವಾರ ಒಂದೇ ದಿನ 8,30,391 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಆಗಸ್ಟ್ 12, 2020ರವೆರೆಗೆ 2,68,45,688 ಜನರು ಕೊರೊನಾ ಪರೀಕ್ಷೆಗೆ ಒಳಪಟ್ಟಿದ್ದಾರೆ.
ಮೊದಲ ನಾಲ್ಕು ಸ್ಥಾನಗಳಲ್ಲಿ ಕ್ರಮವಾಗಿ ಮಹಾರಾಷ್ಟ್ರ, ತಮಿಳುನಾಡು, ಆಂಧ್ರ ಪ್ರದೇಶ ಮತ್ತು ಕರ್ನಾಟಕ ರಾಜ್ಯಗಳಿವೆ. ನಿನ್ನೆ ಒಂದೇ ದಿನ ಮಹಾರಾಷ್ಟ್ರದಲ್ಲಿ 12,712, ತಮಿಳುನಾಡು-5,871, ಆಂಧ್ರ ಪ್ರದೇಶ-9,597 ಮತ್ತು ಕರ್ನಾಟಕದಲ್ಲಿ 7,883 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.