ಬೆಂಗಳೂರು: ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ದಲಿತರ ಪರವೋ ಅಥವಾ ಭಯೋತ್ಪಾದಕರ ಪರವೋ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದು, ನಾವು ಮನುಷ್ಯರ ಪರ ಅಂತಾ ಟಾಂಗ್ ಕೊಟ್ಟಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರೋ ವಿಪಕ್ಷ ನಾಯಕ ಸಿದ್ದರಾಮಯ್ಯ.. ಕಟೀಲ್ ಅವರೇ, ನಾವು ಮನುಷ್ಯರ ಪರ, ಮನುಷ್ಯ ವಿರೋಧಿಗಳ ಪರ ಅಲ್ಲ. ನಾವು ದೀಪ ಹಚ್ಚುವವರ ಪರ, ಬೆಂಕಿ ಹಚ್ಚುವವರ ಪರ ಅಲ್ಲ. ನಾವು ಕಟ್ಟುವವರ ಪರ, ಕೆಡವುವವರ ಪರ ಅಲ್ಲ. ನಮ್ಮನ್ನು ಮತ್ತು ನಿಮ್ಮನ್ನು ಇದಕ್ಕಿಂತ ಚೆನ್ನಾಗಿ ಹೇಗೆ ಪರಿಚಯಿಸಲಿ ಹೇಳಿ? ಎಂದು ಪ್ರಶ್ನಿಸಿದ್ದಾರೆ.
ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಾಟೆಗೆ ಸಿದ್ದರಾಮಯ್ಯ ಕಾರಣ ಅವರು ದಲಿತರ ಪರವೋ, ಭಯೋತ್ಪಾದಕರ ಪರವೋ ಅಂತಾ ನಳೀನ್ ಕುಮಾರ್ ಕಟೀಲ್ ಪ್ರಶ್ನಿಸಿದ್ದರು.
Laxmi News 24×7