Breaking News
Home / ಜಿಲ್ಲೆ / ನೀರು ಹಂಚಿಕೆ ವಿಚಾರದಲ್ಲಿ ಗೆಜೆಟ್ ಅಧಿಸೂಚನೆ ಹೊರಡಿಸಲು ಸುಪ್ರಿಂ ಕೋರ್ಟ ಮ್ಮತಿಸಿರುವುದನ್ನು ನಾನು ಸ್ವಾಗತಿಸುತ್ತೇನೆ:ಸಚಿವರಾದ ರಮೇಶ್ ಜಾರಕಿಹೊಳಿ

ನೀರು ಹಂಚಿಕೆ ವಿಚಾರದಲ್ಲಿ ಗೆಜೆಟ್ ಅಧಿಸೂಚನೆ ಹೊರಡಿಸಲು ಸುಪ್ರಿಂ ಕೋರ್ಟ ಮ್ಮತಿಸಿರುವುದನ್ನು ನಾನು ಸ್ವಾಗತಿಸುತ್ತೇನೆ:ಸಚಿವರಾದ ರಮೇಶ್ ಜಾರಕಿಹೊಳಿ

Spread the love

ಮಹದಾಯಿ ನೀರು ಹಂಚಿಕೆ: ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಿಸಿದ ಸಚಿವ ರಮೇಶ್ ಜಾರಕಿಹೊಳಿ…

ಬೆಳಗಾವಿ: ಉತ್ತರ ಕರ್ನಾಟಕದ ಬಹುದಿನದ ಬೇಡಿಕೆಯಾದ ಮಹದಾಯಿ ಯೋಜನೆಯ ನದಿ ನೀರು ಹಂಚಿಕೆ ವಿಚಾರದಲ್ಲಿ ಗೆಜೆಟ್ ಅಧಿಸೂಚನೆ ಹೊರಡಿಸಲು ಸುಪ್ರಿಂ ಕೋರ್ಟ ಮ್ಮತಿಸಿರುವುದನ್ನು ನಾನು ಸ್ವಾಗತಿಸುತ್ತೇನೆ ಎಂದು ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಕರ್ನಾಟಕ ಸರ್ಕಾರವು ಮಹದಾಯಿ ಯೋಜನೆ ಬಗ್ಗೆ ಗೆಜೆಟ್ ಅಧಿಸೂಚನೆ ಹೊರಡಿಸಲೇಬೇಕೆಂದು ಈ ಹಿಂದೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತ್ತು ಎಂದು ತಿಳಿಸಿದ್ದಾರೆ.

ಈ ಗೆಜೆಟ್ ಅಧಿಸೂಚನೆ ಹೊರಡಿಸಿದ ನಂತರ 2.18 ಟಿ.ಎಂ.ಸಿ. ಬಂಡೂರ ತಿರುವು ನಾಲೆ ಮತ್ತು 1.72 ಟಿ.ಎಂ.ಸಿ. ಕಳಸಾ ತಿರುವು ನಾಲೆಯಿಂದ (ಒಟ್ಟು 390 ಟಿ.ಎಂ.ಸಿ.) ನೀರನ್ನು ಮಲಪ್ರಭಾ ನದಿಗೆ ಹರಿಸಲು ಸಕ್ಷಮ ಪ್ರಾಧಿಕಾರದ ಅನುಮೋದನೆಯನ್ನು ಪಡೆದು ಕಾಮಗಾರಿಗಳನ್ನು ಕೈಗೊಳ್ಳುತ್ತೇವೆ.

ಈ ಕುಡಿಯುವ ನೀರಿನ ಯೋಜನೆಯ ಅನುಷ್ಠಾನಕ್ಕೆ ಈಗಾಗಲೇ ಪರಿಸರ ಇಲಾಖೆಯಿಂದ ವಿನಾಯ್ತಿ ಪಡೆದಿದ್ದು ಕೇಂದ್ರ ಜಲ ಆಯೋಗ ಮತ್ತು ಅರಣ್ಯ ಇಲಾಖೆಯ ಅನುಮೋದನೆ ಪಡೆಯಬೇಕಾಗಿದೆ. ಇದಲ್ಲದೇ ಮಹದಾಯಿ ಜಲಾನಯನ ಪ್ರದೇಶದ ಕೆರೆಕಟ್ಟೆಗಳನ್ನು ತುಂಬಲು 1.50 ಟಿ.ಎಂ.ಸಿ. ನೀರನ್ನು ಬಳಸುತ್ತೇವೆ. ವಿದ್ಯುಚ್ಛಕ್ತಿಯ ಉತ್ಪಾದನೆಗಾಗಿ 8.02 ಟಿ.ಎಂ.ಸಿ. ನೀರನ್ನು ಕರ್ನಾಟಕ ವಿದ್ಯುಚ್ಛಕ್ತಿ ನಿಗಮಕ್ಕೆ ನೀಡುತ್ತೇವೆ ಮತ್ತು ಬಳಸಿದ ನೀರನ್ನು ಪುನಃ ನದಿಗೆ ಬಿಡುತ್ತೇವೆ.

ಉತ್ತರ ಕರ್ನಾಟಕದ ರೈತರ ಕನಸು ನನಸಾಗುವ ಸಂದರ್ಭ ಈಗ ಕೂಡಿ ಬಂದಿದೆ. ನಮ್ಮ ಪಾಲಿನ ಒಟ್ಟು 13.42 ಟಿ.ಎಂ.ಸಿ. ನೀರನ್ನು ಸದ್ಬಳಕೆ ಮಾಡಿಕೊಳ್ಳಲು ಸುಪ್ರಿಂ ಕೋರ್ಟ್ ಅವಕಾಶ ಕಲ್ಪಿಸುತ್ತಿರುವುದು ಈ ಭಾಗದ ನೀರಾವರಿ ಯೋಜನೆಗಳನ್ನು ಕಾಲಮಿತಿಯಲ್ಲಿ ಅನುಷ್ಠಾನಗೊಳಿಸಲು ನೆರವಾಗುತ್ತದೆ.

ದಾವೆಗಳ ಅಂತಿಮ ಇತ್ಯರ್ಥಕ್ಕಾಗಿ ವಿಚಾರಣೆಯ ದಿನಾಂಕವನ್ನು ಜುಲೈ 15, 2020 ರಂದು ನಿಗಧಿಪಡಿಸಲಾಗಿದೆ. ಅಂದು ನಾವು ಹೆಚ್ಚುವರಿ ದಾಖಲಾತಿಗಳನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿ ನಮ್ಮ ರಾಜ್ಯಕ್ಕೆ ನ್ಯಾಯಯುತವಾಗಿ ಸಿಗುವ ನೀರನ್ನು ಪಡೆದುಕೊಳ್ಳುತ್ತೇವೆ ಎಂದು ಸಚಿವ ರಮೇಶ್ ಜಾರಕಿಹೊಳಿ ಅವರು ತಿಳಿಸಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ