Breaking News

ಪ್ರಶಾಂತ ಭೂಷನ್ ತಪ್ಪಿತಸ್ಥಎಂದು ಸುಪ್ರೀಂ ಕೋರ್ಟ್ ತೀರ್ಪು

Spread the love

ಹೊಸದಿಲ್ಲಿ: ನ್ಯಾಯಾಂಗ ನಿಂದನೆ ಕೇಸ್​ನಲ್ಲಿ ಪ್ರಶಾಂತ್ ಭೂಷಣ್ ತಪ್ಪಿತಸ್ಥ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಸಿಜೆಐ ‌ಎಸ್.ಎ.ಬೋಬಡೆ ವಿರುದ್ಧ ಎರಡು ಟ್ವೀಟ್ ಮಾಡಿ ಪೇಚಿಗೆ ಸಿಲುಕಿದ್ದ ಪ್ರಶಾಂತ್ ಭೂಷಣ್ ತಪ್ಪಿತಸ್ಥ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ಕೊರೊನಾ ಲಾಕ್​ಡೌನ್ ವೇಳೆ ಸುಪ್ರೀಂಕೋರ್ಟ್ ಸಿಜೆಐ ಎಸ್.ಎ.ಬೋಬಡೆ ಅವರು ತಮ್ಮ ಸ್ವಂತ ಊರಾದ ಮಹಾರಾಷ್ಟ್ರದ ನಾಗಪುರದಲ್ಲಿದ್ದರು. ಆಗ ಹರ್ಲೆ ಡೇವಿಡ್‌ಸನ್ ಬೈಕ್ ಮೇಲೆ ಕುಳಿತು ಫೋಟೋಗೆ ಪೋಸ್ ನೀಡಿದ್ದರು. ಇದಕ್ಕೆ ಸಂಬಂಧಪಟ್ಟಂತೆ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಎರಡು ಟ್ವೀಟ್ ಮಾಡಿದ್ದರು. ಸಿಜೆ ಎಸ್.ಎ.ಬೋಬಡೆ ಅವರು ಬೈಕ್ ಮೇಲೆ ಕುಳಿತುಕೊಂಡು ತಲೆಗೆ ಹೆಲ್ಮೆಟ್ ಹಾಕಿಲ್ಲ.

ಲಾಕ್‌ಡೌನ್ ನಿಂದ ಸುಪ್ರೀಂಕೋರ್ಟ್ ಗೆ ಬಾಗಿಲು ಹಾಕಿ ಬೈಕ್ ಸವಾರಿ ಮಾಡ್ತಿದ್ದಾರೆ ಎಂದೆಲ್ಲಾ ಟ್ವೀಟ್ ಮಾಡಿದ್ದರು. ಈ ಟ್ವೀಟ್‌ಗಳಿಂದ ಸಂಕಟದಲ್ಲಿ ಸಿಕ್ಕಿ ಹಾಕಿಕೊಂಡ ಪ್ರಶಾಂತ್ ಭೂಷಣ್ ಮೇಲೆ ಸುಪ್ರೀಂಕೋರ್ಟ್ ಸ್ವಪ್ರೇರಣೆಯಿಂದ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಿಕೊಂಡಿತ್ತು. ಇಂದಿನ ತೀರ್ಪಿನಲ್ಲಿ ಪ್ರಶಾಂತ್ ಭೂಷಣ್ ತಪ್ಪಿತಸ್ಥ ಎಂದು ತೀರ್ಪು ನೀಡಿದ್ದು, ಶಿಕ್ಷೆಯ ಬಗ್ಗೆ ಆಗಸ್ಟ್ 20 ರಂದು ವಿಚಾರಣೆ ನಡೆಸುವುದಾಗಿ ಜಸ್ಟೀಸ್ ಅರುಣ್ ಮಿಶ್ರಾ ಪೀಠದಲ್ಲಿ ತಿಳಿಸಲಾಗಿದೆ


Spread the love

About Laxminews 24x7

Check Also

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಹಾರಾಟ ಕಡಿಮೆ: ರಾಜ್ಯಸಭೆಯಲ್ಲಿ ಸಂಸದ ಈರಣ್ಣ ಕಡಾಡಿ ಆಕ್ರೋಶ

Spread the loveನವದೆಹಲಿ: ಕರ್ನಾಟಕದ ಎರಡನೇ ರಾಜಧಾನಿ ಎಂದೇ ಖ್ಯಾತವಾದ ಬೆಳಗಾವಿ  ನಗರವು ಶಿಕ್ಷಣ, ಉದ್ಯಮ ಹಾಗೂ ರಕ್ಷಣಾ ಕ್ಷೇತ್ರಗಳಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ