Breaking News

ನಾನು ಹುಟ್ಟಿ ಬೆಳೆದಂತಹ ಮನೆ ಸಂಪೂರ್ಣವಾಗಿ ನಾಶವಾಗಿದೆ.3 ಕೋಟಿ ನಷ್ಟ ಆಗಿದೆ: ಶ್ರೀನಿವಾಸ ಮೂರ್ತಿ

Spread the love

ಬೆಂಗಳೂರು: ನಾವು ಯಾರ ಮೇಲೂ ದ್ವೇಷಕ್ಕೆ ಹೋಗಿಲ್ಲ. ಎಲ್ಲರೂ ಅಣ್ಣ-ತಮ್ಮಂದಿರ ರೀತಿ ಇದ್ದೇವೆ. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಎಲ್ಲರೂ ಒಟ್ಟಾಗಿ ಇದ್ದೇವೆ ಎಂದು ಅಖಂಡ ಶ್ರೀನಿವಾಸ ಮೂರ್ತಿ ಹೇಳಿದರು.ಮಾಧ್ಯಮಗಳ ಜೊತೆ ಮಾತನಾಡಿದ ಅಖಂಡ ಶ್ರೀನಿವಾಸ ಮೂರ್ತಿ, ಯಾರು ಈ ಕೃತ್ಯಗಳನ್ನು ಮಾಡಿದ್ದಾರೆ ಎಂಬುದನ್ನು ಪೊಲೀಸ್ ಇಲಾಖೆ ತನಿಖೆ ಮಾಡಿ, ನ್ಯಾಯ ಒದಗಿಸಿಕೊಡಬೇಕು ಎಂದು ದೂರನ್ನು ಕೊಟ್ಟಿದ್ದೇವೆ. ಈ ಗಲಭೆಯಿಂದ ಏನೇನು ನಷ್ಟ ಆಗಿದೆ ಎಂದು ಒಂದು ಪಟ್ಟಿ ಮಾಡಿ ಮಾಡಿಕೊಡುತ್ತೇನೆ. ನಾನು ಯಾರ ಹೆಸರು ಹೇಳಿಲ್ಲ, ತನಿಖೆಯ ವೇಳೆ ಪೊಲೀಸರು ಘಟನೆಯ ಬಗ್ಗೆ ಬಹಿರಂಗ ಪಡಿಸುತ್ತಾರೆ ಎಂದರು.

ನಾನು ಎಲ್ಲರ ಜೊತೆಯೂ ಸಮಾನವಾಗಿ ಇದ್ದೇನೆ. ಅವರು ನನ್ನ ಮೇಲೆ ದ್ವೇಷ ಸಾಧಿಸುವ ಅವಶ್ಯಕತೆ ಇಲ್ಲ. ಆದರೂ ನನ್ನ ಮನೆಯನ್ನು ಹಾಳು ಮಾಡಿದ್ದಾರೆ. ಒಂದು ವೇಳೆ ಮನೆಯಲ್ಲಿ ಮಕ್ಕಳಿದಿದ್ದರೆ ಯಾರು ಕಾಪಾಡುತ್ತಿದ್ದರು. ಅದಕ್ಕೆ ನಾನು ಪೊಲೀಸರ ಭದ್ರತೆಗೆ ಕೇಳಿಕೊಂಡಿದ್ದೇನೆ. ಜೊತೆಗೆ ರಾಜ್ಯ ಸರ್ಕಾರದ ಬಳಿಯೂ ರಕ್ಷಣೆಗಾಗಿ ಮನವಿ ಮಾಡಿಕೊಂಡಿದ್ದೇನೆ ಎಂದು ತಿಳಿಸಿದರು.

ಮನೆ ಸಂಪೂರ್ಣವಾಗಿ ನಾಶವಾಗಿದೆ. ನಮ್ಮ ಮನೆ ಹಾಳು ಮಾಡಿದರಲ್ಲ ಎಂಬ ದುಃಖ ಇದೆ. ಯಾಕೆಂದರೆ ನಾನು ಹುಟ್ಟಿ ಬೆಳೆದಂತಹ ಮನೆ ಅದು. ನಾನು ಆ ಪಕ್ಷ, ಈ ಪಕ್ಷ ಎಂದು ಭೇದ ಭಾವ ಮಾಡಿಲ್ಲ. ಎಲ್ಲರ ಜೊತೆಗೆ ಒಟ್ಟಾಗಿ ಕೆಲಸ ಮಾಡಿದ್ದೇನೆ. ಪ್ರತಿದಿನ ನನ್ನ ಕ್ಷೇತ್ರ ಬಿಟ್ಟು ಹೊರಗೆ ಹೋಗಿಲ್ಲ. ಅಲ್ಲದೇ ನಾವು ಯಾರ ಮೇಲೂ ದ್ವೇಷಕ್ಕೆ ಹೋಗಿಲ್ಲ. ಎಲ್ಲರೂ ಅಣ್ಣ-ತಮ್ಮಂದಿರ ರೀತಿ ಇದ್ದೇವೆ. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಎಲ್ಲರೂ ಒಟ್ಟಾಗಿ ಇದ್ದೀವಿ. ನಮ್ಮ ಕ್ಷೇತ್ರದಲ್ಲಿ 24 ವರ್ಷದಿಂದ ಯಾವ ಘಟನೆಗಳು ಆಗಿಲ್ಲ. ಮುಂದಕ್ಕೂ ಆಗಬಾರದು ಎಂದು ಶ್ರೀವಿನಾಸ ಮೂರ್ತಿ ಹೇಳಿದರು.

ನವೀನ್ ನನ್ನ ಅಕ್ಕನ ಮಗ. ಆದರೆ ನನಗೂ ಅವನಿಗೂ ಸಂಬಂಧ ಇಲ್ಲ. ಮನೆಯಲ್ಲಿರೋ ಆಸ್ತಿ-ಪಾಸ್ತಿ ಬಗ್ಗೆ ಪಟ್ಟಿ ಮಾಡಿ ನಂತರ ದೂರು ಕೊಡಲಾಗುತ್ತೆ. ಯಾರಿಗೆಲ್ಲಾ ಸಮಸ್ಯೆ ಆಗಿದೆ ಅವರೆಲ್ಲರಿಗೂ ಪ್ರತ್ಯೇಕ ದೂರು ಕೊಡಲು ತಿಳಿಸಲಾಗಿದೆ. ನಾನು ಪ್ರತ್ಯೇಕವಾಗಿ ದೂರು ಕೊಡುತ್ತೇನೆ. ಮನೆ, ಮನೆಯಲ್ಲಿದ್ದ ವಸ್ತು, ದಾಖಲಾತಿ ಎಲ್ಲವೂ ಹಾಳಾಗಿದೆ. ಒಟ್ಟು ಸುಮಾರು ಮೂರು ಕೋಟಿಯಷ್ಟು ನಷ್ಟವಾಗಿದೆ. ಪೊಲೀಸರು ಈ ಕುರಿತು ತನಿಖೆ ಮಾಡಿ ನ್ಯಾಯ ಒದಗಿಸಿಕೊಡಬೇಕು ಎಂದು ಮನವಿ ಮಾಡಿಕೊಂಡರು.

 

 


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ