Breaking News

ಅಖಂಡ ಶ್ರೀನಿವಾಸಮೂರ್ತಿ ಮೇಲೆ ಬಿಜೆಪಿ ಸರ್ಕಾರ ಒತ್ತಡ ಹೇರುತ್ತಿದೆ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗಂಭೀರ ಆರೋಪ

Spread the love

ಬೆಂಗಳೂರು: ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಇಂಥಾದ್ದೇ ಹೇಳಿಕೆ ಕೊಡಿ ಅಂತಾ ನಮ್ಮ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮೇಲೆ ಬಿಜೆಪಿ ಸರ್ಕಾರ ಒತ್ತಡ ಹೇರುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ಗಲಭೆಗೆ ಕಾಂಗ್ರೆಸ್ಸಿನಲ್ಲಿ ಆಂತರಿಕ ಭಿನ್ನಾಭಿಪ್ರಾಯಗಳೇ ಕಾರಣ ಎಂದಿದ್ದ ಗೃಹ ಸಚಿವರನ್ನು ಏಕ ವಚನದಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಮಾತು ಹೇಳಲು ಬೊಮ್ಮಾಯಿ ಯಾರು, ಅವರೇನು ಇನ್ಸ್‍ಪೆಕ್ಟರ್ರಾ..? ಆಯೋಗನಾ ಎಂದು ಪ್ರಶ್ನಿಸಿದ್ದಾರೆ. ಬಿಜೆಪಿಯವರ ಒಳ ತಂತ್ರದಿಂದಲೇ ಗಲಭೆ ನಡೆದಿದೆ ಎಂದು ತಿರುಗೇಟು ನೀಡಿದ್ದಾರೆ. ಪಾಲಿಕೆ ಸದಸ್ಯರಿಗೆ ನೊಟೀಸ್ ಕೊಟ್ಟು ಬ್ಲಾಕ್‍ಮೇಲ್ ಮಾಡುತ್ತಿದ್ದಾರೆ. ನಾವಿದಕ್ಕೆ ಹೆದರುವ ಪ್ರಶ್ನೆಯೇ ಇಲ್ಲ ಎಂದು ಡಿಕೆಶಿ ಸ್ಪಷ್ಟಪಡಿಸಿದ್ದಾರೆ. ಈ ಸರ್ಕಾರದಲ್ಲಿ ಒಬ್ಬ ಸಚಿವ, ಶಾಸಕನನ್ನು ನಿಯಂತ್ರಿಸಲು ಅವರಿಂದಲೇ ಸಾಧ್ಯ ಆಗ್ತಿಲ್ಲ ಎಂದು ಸರ್ಕಾರವನ್ನು ಡಿಕೆಶಿ ಟೀಕಿಸಿದ್ದಾರೆ.ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ನೊಟೀಸ್ ಕೊಟ್ರೆ ತಪ್ಪೇನು? ತಪ್ಪು ಮಾಡದಿದ್ರೆ ಏಕೆ ಹೆದರಬೇಕು? ನಾವು ಯಾರನ್ನು ಬ್ಲಾಕ್ ಮೇಲೆ ಮಾಡ್ತಿಲ್ಲ ಎಂದಿದ್ದಾರೆ. ಶಾಸಕರು ಭದ್ರತೆ ಕೇಳಿದ್ದಾರೆ. ಕೊಟ್ಟಿದ್ದೀವಿ ಅಷ್ಟೇ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.


Spread the love

About Laxminews 24x7

Check Also

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ ಬದಲಾವಣೆ ನಿರ್ಧಾರ: ಡಿ.ಕೆ ಶಿವಕುಮಾರ್

Spread the loveಬೆಂಗಳೂರು: ರಾಜ್ಯದಲ್ಲಿ ಇರೋ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ  ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ