ಬೆಳಗಾವಿ : ಯಮಕನಮರಡಿ ಕ್ಷೇತ್ರದ ವ್ಯಾಪ್ತಿಯ ಎಸ್ಸೆಸ್ಸೆಲ್ಸಿ ಯಲ್ಲಿ ಉತ್ತಮ ಅಂಕ ಪಡೆದ ಟಾಫ್ 10 ವಿದ್ಯಾರ್ಥಿಗಳಿಗೆ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸೋಮವಾರ ಸನ್ಮಾನ ಮಾಡಿ, ವಿದ್ಯಾರ್ಥಿಗಳಿಗೆ ತಲಾ 5 ಸಾವಿರ ಚೆಕ್ ವಿತರಿಸಿದರು.
ಇದೇ ವೇಳೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯಲ್ಲಿಯೇ ಯಮಕನಮರಡಿ ಕ್ಷೇತ್ರದಲ್ಲಿ ಮೊಲದಲಿನಿಂದಲೂ ಶಿಕ್ಷಣ ಕ್ಷೇತ್ರಕ್ಕೆ ವಿಶೇಷ ಒತ್ತು ನೀಡಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಸನ್ಮಾನ ಮಾಡುವ ಮೂಲಕ ಮಕ್ಕಳಿಗೆ ಪ್ರೋತ್ಸಾಹಿಸುವ ಕೆಲಸ ಮಾಡಲಾಗುತ್ತಿದೆ. ಅದೇ ರೀತಿ ಹುಕ್ಕೇರಿ ತಾಲ್ಲೂಕಿನ ಟಾಫ್ 10 ವಿದ್ಯಾರ್ಥಿಗಳಿಗೆ ಗೌರವಿಸಲಾಯಿತು ಎಂದು ಹೇಳಿದರು.
ದೇಶದ ಅಭಿವೃದ್ಧಿ ಶಿಕ್ಷಣದಿಂದ ಮಾತ್ರ ಸಾಧ್ಯ. ಆದ ಕಾರಣ ಶಿಕ್ಷಣಕ್ಕೆ ಪ್ರೋತ್ಸಾಹಿಸುವ ಕೆಲಸ ನಿರಂತರವಾಗಿ ನಮ್ಮಿಂದ ಕ್ಷೇತ್ರದಲ್ಲಿ ನಡೆಯಲಿದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳಾದ ರಾಧಿಕಾ ಬಡ್ಡಿ, ಅಡಿವೇಶ ಮುಗಳಿ, ಚಂದನ ವೈ, ಸರ್ವೇಶ ಪಾಟೀಲ, ಸಂಗೀತಾ ತೋಲಿ, ಲಕ್ಷ್ಮಿ ಹಿರೇಮಠ, ಲಕ್ಷ್ಮಿ ದಡ್ಡಿ, ಯೋಗೇಶ್ ಜಿ, ಪೂಜಾ ಪಾಟೀಲ, ಶ್ವೇತಾ ಚೌಗಲಾ ಸನ್ಮಾನ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಹುಕ್ಕೇರಿ ಕ್ಷೇತ್ರದ ಶಿಕ್ಷಣ ಅಧಿಕಾರಿಗಳು , ಶಾಸಕ ಸತೀಶ್ ಜಾರಕಿಹೊಳಿ ಪುತ್ರ ರಾಹುಲ್, ಪುತ್ರಿ ಪ್ರೀಯಾಂಕಾ, ವಿವಿಧ ಶಾಲಾ ಸಿಬ್ಬಂದಿ ಇದ್ದರು.