ಬೆಂಗಳೂರು: ಬೆಳಗಾವಿ, ಧಾರವಾಡ ಸೇರಿ ಕರಾವಳಿ ಭಾಗದಲ್ಲಿ ಆ. 21 ವರೆಗೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಜನರು ಮುನ್ನಚ್ಚರಿಕೆ ವಹಿಸಬೇಕು ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಕಲಬುರಗಿ ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕೈದು ದಿನಗಳ ಕಾಲ ಭಾರೀ ಮಳೆ ಸುರಿಯಬಹುದು. ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಕರ್ನಾಟಕದ ಉತ್ತರ ಒಳನಾಡುಗಳಲ್ಲಿ ಚದುರಿದಂತೆ ಇಂದು ಮತ್ತು ನಾಳೆ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ನಿರ್ದೇಶಕರು ತಿಳಿಸಿದ್ದಾರೆ.
ಪಶ್ಚಿಮಘಟ್ಟದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತವಾಗಿ ಮಳೆ ಸುರಿಯುತ್ತಿದ್ದು, ರಾಜ್ಯದ 11 ಜಿಲ್ಲೆಗಳಲ್ಲಿ 56 ತಾಲೂಕುಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಅಲ್ಲದೇ ಅಪಾರ ಹಾನಿಯಾಗಿದೆ.
Laxmi News 24×7