ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಜಯಂತಿಯಂದು, ಬೆಳಗಾವಿಯ ಪೀರನವಾಡಿಯಲ್ಲಿ ಅವರ ಪ್ರತಿಮೆ ತೆರವುಗೊಳಿಸಿರುವುದು ನಿಜಕ್ಕೂ ಕನ್ನಡಿಗರಿಗೆ ಆಗಿರುವ ಅಪಮಾನ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಟ್ವಿಟ್ ಮಾಡಿರುವ ಅವರು, ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ಕಾನೂನು ರೀತಿಯಲ್ಲಿ ಅನುಮತಿ ನೀಡಿ, ಈ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸುವಂತೆ ಬೆಳಗಾವಿ ಜಿಲ್ಲಾಡಳಿತಕ್ಕೆ ಅವರು ಮನವಿ ಮಾಡಿದ್ದಾರೆ.
ಆ. 15 ರಂದು ಬೆಳಗಿನ ಜಾವ ಕೆಲ ಯುವಕರು ಪೀರಣವಾಡಿಯ ವೃತ್ತದಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಸ್ಥಾಪಿಸಿದ್ದರು. ಬಳಿಕ ಪೊಲೀಸ್ ಇಲಾಖೆ ಅದನ್ನು ತೆರವುಗೊಳಿಸಿ ವಶದಲ್ಲಿರಿಸಿದೆ.