Breaking News

ದೇಶದಲ್ಲಿ 27 ಲಕ್ಷ ಗಡಿದಾಟಿದ ಕೋವಿಡ್​ 19 ಸೋಂಕಿತರ ಸಂಖ್ಯೆ

Spread the love

ನವದೆಹಲಿ: ದೇಶದಲ್ಲಿ ಕೋವಿಡ್​ 19 ಸೋಂಕಿತ ಸಂಖ್ಯೆ ದಿನ ದಿನೇ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ 55,079 ಹೊಸ ಕೇಸ್​ಗಳು ಬೆಳಕಿಗೆ ಬಂದಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 27,02,743ಕ್ಕೆ ಏರಿಕೆಯಾಗಿದ್ರೆ, 876 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ಇಲ್ಲಿಯವರೆಗೆ ಬಲಿಯಾದವರ ಸಂಖ್ಯೆ 51,797ಕ್ಕೆ ಬಂದು ನಿಂತಿದೆ.

27,02,743 ಮಂದಿ ಸೋಂಕಿತರ ಪೈಕಿ ಒಟ್ಟು ಗುಣಮುಖರಾದವರ ಸಂಖ್ಯೆ 19,77,780ಕ್ಕೆ ತಲುಪಿದೆ. ಪ್ರಸ್ತುತ ದೇಶದಲ್ಲಿನ್ನೂ 6,73,166 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಇನ್ನು ಕರ್ನಾಟಕದಲ್ಲಿ ನಿನ್ನೆ ಒಂದೇ ದಿನಕ್ಕೆ 6,317 ಕೋವಿಡ್​-19 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ನಿನ್ನೆ ಸಾವನ್ನಪ್ಪಿದ್ದವರು 115 ಮಂದಿ.

ರಾಜ್ಯದಲ್ಲಿ ಒಟ್ಟು 80,643 ಸಕ್ರಿಯ ಪ್ರಕರಣಗಳಿದ್ದು, ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡವರು 7,071 ಮಂದಿ.

ಬೆಂಗಳೂರಿನಲ್ಲಿಯೇ 2,053 ಪ್ರಕರಣಗಳು ದೃಢಪಟ್ಟಿದ್ದರೆ, ಒಟ್ಟು 34,408 ಸಕ್ರಿಯ ಪ್ರಕರಣಗಳಿದ್ದು, 39 ಮಂದಿ ಸಾವನ್ನಪ್ಪಿದ್ದಾರೆ. 2,190 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ