ಅಥಣಿ: ಧಾರವಾಡ ಜಿಲ್ಲೆಯ ಬೋಗುರ ಗ್ರಾಮದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಖಂಡಿಸಿ ಪಟ್ಟಣದಲ್ಲಿ ಜಂಗಮ ಸಮಾಜದ ಪದಾಧಿಕಾರಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು.
ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿ, ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದರು. ಅಥಣಿ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರ ಮನವಿ ಸಲ್ಲಿಸಿದರು.
ಪುಟ್ಟ ಹಿರೇಮಠ ಮಾತನಾಡಿ, ಅಮ್ಮನಿಗೆ ಆರೋಗ್ಯ ಸರಿ ಇಲ್ಲದ ಕಾರಣ ದೇವಸ್ಥಾನಕ್ಕೆ ತೆರಳಿದ್ದ ಬಾಲಕಿ ಮೇಲೆ ಪಕ್ಕದ ಗ್ರಾಮದ ಯುವಕ ಅತ್ಯಾಚಾರ ಎಸಗಿದ್ದ. ಘಟನೆಯಿಂದ ನೊಂದ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಅತ್ಯಾಚಾರಿ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.
Laxmi News 24×7