Breaking News

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಅಭಿಮಾನಿ ಬಳಗದಿಂದ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

Spread the love

ಬೆಳಗಾವಿ ಜಿಲ್ಲೆಯ ಪೀರನವಾಡಿಯಲ್ಲಿ ಇದೇ ಆಗಸ್ಟ್‌ನಲ್ಲಿ15 ಅಂದರೆ ಸ್ವಾತಂತ್ರ್ಯೋತ್ಸವ ಹಾಗೂ ರಾಯಣ್ಣೋತ್ಸವದಂದು ಪ್ರತಿಷ್ಠಾಪಿಸಲಾಗಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಹಾಗೂ ರಾಷ್ಟ್ರಧ್ವಜವನ್ನು ತೆರವುಗೊಳಿಸಿ ಅವಮಾನಿಸಿದ್ದನ್ನು ಖಂಡಿಸಿ ಹಾಗೂ ಮತ್ತೆ ಅದೇ ಜಾಗದಲ್ಲಿ ಗೌರವಯುತವಾಗಿ ಶೀಗ್ರದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪಿಸುವಂತೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಉಗರಗೋಳ ಗ್ರಾಮದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಅಭಿಮಾನಿ ಬಳಗದವರು ತಾಲೂಕಾ ದಂಡಾಧಿಕಾರಿಗಳಾದ ಪ್ರಶಾಂತ ಪಾಟೀಲ್ ಅವರ ಮೂಲಕ ಮಾನ್ಯ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಇದೇ ವೇಳೆ ಶೀಗ್ರವಾಗಿ ಕ್ರಮ ತೆಗೆದುಕೊಂಡು ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಅದೇ ಸ್ಥಳದಲ್ಲಿ ಮರು ಸ್ಥಾಪಿಸದೇ ಇದ್ದಲ್ಲಿ ಮುಂದೆ ಉಗ್ರವಾದ ಹೋರಾಟ ಮಾಡುವುದಾಗಿ ಎಚ್ಚರಿಸಿದರು.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ