Breaking News

ಘಟಪ್ರಭಾ ನದಿ ಗೋಕಾಕ್​​ನ ಬಡಾವಣೆಗಳು ಜಲಾವೃತ

Spread the love

ಬೆಳಗಾವಿ: ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರಿ ಮಳೆಯಾದ ಹಿನ್ನೆಲೆ ನದಿಗಳು ಉಕ್ಕಿ ಹರಿಯುತ್ತಿವೆ. ಗೋಕಾಕ್ ತಾಲೂಕಿನಲ್ಲಿ ಘಟಪ್ರಭಾ ನದಿ ತುಂಬಿ ಹರಿಯುತ್ತಿದ್ದು, ನಗರದ ಹಲವು ಬಡಾವಣೆಗಳಿಗೆ ನೀರು‌‌ ನುಗ್ಗಿದೆ.
ಹಳೆ ದನಗಳಪೇಟೆ, ಉಪ್ಪಾರ ಓಣಿಗೆ ನೀರು ನುಗ್ಗಿ ಹಾನಿಯಾಗಿದೆ. ಗೋಕಾಕ್ ಪ್ರವಾಹದ ದೃಶ್ಯ ಡ್ರೋಣ್ ಕ್ಯಾಮರಾದಲ್ಲಿ ಸೆರೆಯಾಗಿದೆ.

ಕೃಷ್ಣಾ ನದಿ ನೀರಿನ ಮಟ್ಟದಲ್ಲಿ ಏರಿಕೆಯಾಗಿದ್ದು, 1.95 ಲಕ್ಷ ಕ್ಯೂಸೆಕ್‌ಗೂ ಅಧಿಕ ಒಳಹರಿವು ಇದೆ. ಇದರಿಂದ
ಕೃಷ್ಙಾ ನದಿ ತೀರದ ಜನರಲ್ಲಿ ಪ್ರವಾಹದ ಆತಂಕ ಮುಂದುವರೆದಿದೆ.

ಕೃಷ್ಣಾ, ದೂಧಗಂಗಾ ಹಾಗೂ ಹಿರಣ್ಯಕೇಶಿ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿ ನ್ನು ಕೊಯ್ನಾ ಜಲಾಶಯದಿಂದ ನೀರು ಬಿಡುಗಡೆ ಪ್ರಮಾಣ ಸ್ಥಿರವಾಗಿದೆ. 55,486 ಕ್ಯೂಸೆಕ್ ನೀರು ಹೊರಬಿಡುವುದು ಮುಂದುವರೆದಿದೆ. ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದ ದತ್ತ ಮಂದಿರ ಸಂಪೂರ್ಣ ಮುಳುಗಡೆಯಾಗಿದೆ. ಸದ್ಯ ಕೃಷ್ಣಾ ಅಚ್ಚುಕಟ್ಟು ಪ್ರದೇಶಗಳಲ್ಲಿ ವರುಣನ ಆರ್ಭಟ ತಗ್ಗಿದೆ.


Spread the love

About Laxminews 24x7

Check Also

ಲೋಕಾಯುಕ್ತ ದಾಳಿ: ರಾಶಿರಾಶಿ ಚಿನ್ನ, ನಗದು ಸೇರಿ 37.41 ಕೋಟಿಯ ಆಸ್ತಿ ಪತ್ತೆ

Spread the loveಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದಿಸಿದ ಆರೋಪದಡಿ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 8 ಮಂದಿ ಸರ್ಕಾರಿ ಅಧಿಕಾರಿಗಳ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ