Breaking News

ಮೂರ್ತಿ ಪ್ರತಿಷ್ಠಾಪನೆಗೆ ಹೋರಾಟ ನಡೆಸಿದ್ದೆವೆ.  ಅಲ್ಲಿಯೇ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಕೊಡಿ:ರಾಯಣ್ಣ ಅಭಿಮಾನಿಗಳು,

Spread the love

ಬೆಳಗಾವಿ : ತಾಲ್ಲೂಕಿನ ಪೀರನವಾಡಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ವಿಚಾರ ರಾಜ್ಯದ ಗಮನ ಸೆಳೆದಿದ್ದು,  ಬುಧವಾರ ಪೊಲೀಸ ಅಧಿಕಾರಿಗಳು  ರಾಯಣ್ಣ ಅಭಿಮಾನಿಗಳೊಂದಿಗೆ ನಡೆಸಿದ ಸಭೆ ಸಂಧಾನ ವಿಫಲವಾಗಿದೆ.

ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿಗಳು ಸಭೆ ನಡೆಸಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ 5 ಗುಂಟೆ ಜಾಗ ಕೊಡಿಸಲಾಗುತ್ತದೆ. ಆ ಸ್ಥಳದಲ್ಲಿ ಮೂರ್ತಿ ಸ್ಥಾಪನೆ ಮಾಡಿಕೊಳ್ಳಿ ಎಂದು ತಿಳಿಸಿದರು.

 

ಆದರೆ ಈ ನಿರ್ಧಾರಕ್ಕೆ ಒಪ್ಪದ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು, ಹಲವು ವರ್ಷಗಳಿಂದ ಪೀರನವಾಡಿ ವೃತ್ತದಲ್ಲಿ ಮೂರ್ತಿ ಪ್ರತಿಷ್ಠಾಪನೆಗೆ ಹೋರಾಟ ನಡೆಸಿದ್ದೆವೆ.  ಅಲ್ಲಿಯೇ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಕೊಡಿ ಎಂದು ಪಟ್ಟು ಹಿಡಿದಿದ್ದಾರೆ ಎಂದು ತಿಳಿದು ಬಂದಿದೆ.

ಈ ವಿವಾದ ಕುರಿತು ಸಿದ್ದರಾಮಯ್ಯ ಅವರು ಸಹ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ವಿವಾದವನ್ನು ಬಗೆ ಹರಿಸಿಕೊಳ್ಳಿ ಎಂದು ಟ್ವಿಟ್  ಕೂಡಾ ಮಾಡಿದ್ದರು. ಈ ಹಿನ್ನೆಲೆ ಸಭೆ ನಡೆದಿತ್ತು. ಆದ್ರೆ ಸಭೆ ವಿಫಲವಾಗಿದೆ.


Spread the love

About Laxminews 24x7

Check Also

ಯತ್ನಾಳ್ ಮತ ಅಸಿಂಧು ಆಕ್ಷೇಪ ತಿರಸ್ಕಾರ – ಮತಗಟ್ಟೆಯಲ್ಲಿ ಉಲ್ಲಂಘನೆ ಆಗಿಲ್ಲ ಎಂದ ಚುನಾವಣಾಧಿಕಾರಿ

Spread the loveಬೆಂಗಳೂರು: ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌  ಅವರ ಮತವನ್ನು ಅಸಿಂಧುಗೊಳಿಸಬೇಕೆಂಬ ಕಾಂಗ್ರೆಸ್‌ ಆಕ್ಷೇಪವನ್ನ ಚುನಾವಣಾಧಿಕಾರಿಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ