Breaking News

ಸುಶಾಂತ್ ಸಿಂಗ್ ರಜಪೂತ್  ಅವರ ನಿಧನ ಪ್ರಕರಣ ತನಿಖೆಯನ್ನು ಸಿಬಿಐಗೆ ವಹಿಸಬೇಕು:ಸುಪ್ರೀಂ ಕೋರ್ಟ್

Spread the love

ಹೊಸದಿಲ್ಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್  ಅವರ ನಿಧನ ಪ್ರಕರಣ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್ ಬುಧವಾರ ಮಹತ್ವದ ತೀರ್ಪು ನೀಡಿದೆ. ಸಿಬಿಐ ತನಿಖೆಯನ್ನು ಆಗ್ರಹಿಸುತ್ತ ಬಂದಿದ್ದ ಸುಶಾಂತ್ ಕುಟುಂಬದವರ ಆಗ್ರಹಕ್ಕೆ ಮನ್ನಣೆ ಸಿಕ್ಕಂತಾಗಿದೆ.

ಪ್ರಕರಣದ ವಿಚಾರಣೆಯನ್ನು ಪಟನಾದಿಂದ ಮುಂಬೈಗೆ ವರ್ಗಾಯಿಸಬೇಕು ಎಂದು ಆಗ್ರಹಿಸಿ ನಟಿ ರಿಯಾ ಚಕ್ರವರ್ತಿ ಸಲ್ಲಿಸಿದ್ದ ಪಿಟಿಷನ್ ನಲ್ಲಿ ಇದ್ದ ಅಂಶವನ್ನು ತಳ್ಳಿಹಾಕಿದ ಸುಪ್ರೀಂ ಕೋರ್ಟ್​, ಸಿಬಿಐ ತನಿಖೆಗೆ ಪ್ರಕರಣವನ್ನು ವಹಿಸುವ ಎಲ್ಲ ಅಧಿಕಾರವೂ ಬಿಹಾರ ಸರ್ಕಾರಕ್ಕೆ ಇದೆ. ತನಿಖೆಯ ವಿಚಾರದಲ್ಲಿ ಮಹಾರಾಷ್ಟ್ರ ಸರ್ಕಾರ ಸಿಬಿಐಗೆ ಸಹಕಾರ ನೀಡಬೇಕು ಎಂದು ಆದೇಶಿಸಿದೆ.

ನ್ಯಾಯಮೂರ್ತಿ ಹೃಷಿಕೇಶ್ ರಾಯ್ ಅವರ ಏಕ ಸದಸ್ಯ ಪೀಠ ಈ ಪಿಟಿಷನ್ ಅನ್ನು ವಿಚಾರಣೆಗೆ ಎತ್ತಿಕೊಂಡಿದೆ. ಮುಂಬೈ ಪೊಲೀಸ್ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದರೂ, ಪಟನಾ ಪೊಲೀಸರು ಎಫ್‌ಐಆರ್ ದಾಖಲಿಸಿರುವುದನ್ನು ದೂರಿನಲ್ಲಿವ ಅಂಶಗಳು ಬಹಿರಂಗಪಡಿಸಿವೆ ಎಂದು ಹೇಳಿದ ನ್ಯಾಯಪೀಠ, ರಿಯಾ ಸಲ್ಲಿಸಿದ್ದ ಪಿಟಿಷನ್ ಅನ್ನು ತಿರಸ್ಕರಿಸಿತು. ಇದಕ್ಕೂ ಮುನ್ನ ಆಗಸ್ಟ್ 11ರ ವಿಚಾರಣೆ ವೇಳೆ ಪಿಟಿಷನ್ ಕುರಿತ ತೀರ್ಪನ್ನು ಕಾಯ್ದಿರಿಸಿದ್ದಾಗಿ ಹೇಳಿತ್ತು.

ಸುಶಾಂತ್ ಸಿಂಘ್ ಅವರ ತಂದೆ ಕೆಕೆ ಸಿಂಗ್ ಅವರು ರಿಯಾ ಚಕ್ರವರ್ತಿ ವಿರುದ್ಧ ಪಟನಾ ಪೊಲೀಸ್ ಠಾಣೆಯಲ್ಲಿ ಜುಲೈ 25ರಂದು ಕೇಸ್ ದಾಖಲಿಸಿದ್ದರು. ಮಗನ ಆತ್ಮಹತ್ಯೆ ಪ್ರಚೋದನೆ ನೀಡಿದ್ದಾಗಿ ಆಕೆಯ ವಿರುದ್ಧ ಆರೋಪ ಮಾಡಿದ್ದರು. ಅಲ್ಲದೇ  ಸುಶಾಂತ್ ಖಾತೆಯಿಂದ 15 ಕೋಟಿ ರೂಪಾಯಿಯನ್ನು ತನ್ನ ಖಾತೆಗೆ ಆಕೆ ವರ್ಗಾಯಿಸಿಕೊಂಡಿದ್ದಾಳೆ ಎಂದೂ ದೂರಿದ್ದರು.

ಜೂನ್ 14ರಂದು ಸುಶಾಂತ್​ ಸಿಂಗ್ ರಜಪೂತ್​ (34) ಅನುಮಾನಾಸ್ಪದ  ರೀತಿಯಲ್ಲಿ ಮೃತಪಟ್ಟಿದ್ದರು


Spread the love

About Laxminews 24x7

Check Also

ಇಲ್ಲಿನ ಇನ್ಫೋಸಿಸ್ ಕ್ಯಾಂಪಸ್​ನಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆಗೆ ಕಾರ್ಯಾಚರಣೆ ಮುಂದುವರೆದಿದ್ದು,

Spread the loveಮೈಸೂರು: ಇಲ್ಲಿನ ಇನ್ಫೋಸಿಸ್ ಕ್ಯಾಂಪಸ್​ನಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆಗೆ ಕಾರ್ಯಾಚರಣೆ ಮುಂದುವರೆದಿದ್ದು, ಸುರಕ್ಷತಾ ಕ್ರಮವಾಗಿ ಕಂಪನಿಯ ಟ್ರೈನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ