ಹಾಸನ: ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಅವರ ಎದುರೇ ಬಿಜೆಪಿ ಕಾರ್ಯಕರ್ತರು ಕಿತ್ತಾಡಿಕೊಂಡ ಘಟನೆ ಅರಸಿಕೇರೆಯ ಚಲುವನಹಳ್ಳಿಯಲ್ಲಿ ಗುರುವಾರ ನಡೆದಿದೆ.
ಮೂಲ ಬಿಜೆಪಿ ಕಡೆಗಣಿಸಲಾಗುತ್ತಿದೆ ಎಂದು ಕಾರ್ಯಕರ್ತರು ಆರೋಪಿಸಿದ್ದು, ಸಚಿವರ ಎದುರು ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿಕೊಂಡು ನೂಕಾಟ, ತಳ್ಳಾಟ ಮಾಡಿಕೊಂಡಿದ್ದಾರೆ. ಅಲ್ಲದೇ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ಸಚಿವ ಗೋಪಾಲಯ್ಯ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ಕುಮಾರ್ ಕಾರ್ಯಕರ್ತರ ಸಮಾಧಾನ ಪಡೆಸಲು ಹರಸಾಹಸ ಪಟ್ಟ ಪ್ರಸಂಗ ನಡೆಯಿತು.