Breaking News

ಗೌರಿ-ಗಣೇಶ ಹಬ್ಬಕ್ಕೆ ಕಬ್ಬು ಬೆಳೆಗಾರರಿಗೆ ಕೇಂದ್ರ ಸರ್ಕಾರದಿಂದ ಬಿಗ್‌ ಗಿಫ್ಟ್‌: ಬೆಳೆಗಾರರಿಗೆ ಪಾವತಿಸುವ ಕನಿಷ್ಠ ಬೆಲೆ ಹೆಚ್ಚಳ

Spread the love

ನವದೆಹಲಿ ; ಮುಂದಿನ ಮಾರುಕಟ್ಟೆ ವರ್ಷದಲ್ಲಿ ಕಬ್ಬು ಬೆಳೆಗಾರರಿಗೆ ಪಾವತಿಸುವ ಕನಿಷ್ಠ ಬೆಲೆಯನ್ನು ಸಕ್ಕರೆ ಕಾರ್ಖಾನೆಗಳಿಗೆ ಕ್ವಿಂಟಲ್‌ಗೆ 10 ರೂ.ದಿಂದ 285 ರೂ.ಗೆ ಹೆಚ್ಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಈ ಬಗ್ಗೆ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ. ಕಬ್ಬಿನ ಎಫ್‌ಆರ್‌ಪಿಯನ್ನು ಕ್ವಿಂಟಲ್‌ಗೆ 10 ರೂ. ಹೆಚ್ಚಿಸುವ ಆಹಾರ ಸಚಿವಾಲಯದ ಪ್ರಸ್ತಾವವನ್ನು ಸಿಸಿಇಎ ಅಂಗೀಕರಿಸಿದೆ. ಇದು ಕೃಷಿ ವೆಚ್ಚ ಮತ್ತು ಬೆಲೆಗಳ ಆಯೋಗದ (ಸಿಎಸಿಪಿ) ಶಿಫಾರಸಿಗೆ ಅನುಗುಣವಾಗಿದೆ. ಕಬ್ಬು (ನಿಯಂತ್ರಣ) ಆದೇಶ, 1966ರ ಅಡಿ ಎಫ್‌ಆರ್‌ಪಿಯು ಸಕ್ಕರೆ ಕಾರ್ಖಾನೆಗಳು ಕಬ್ಬಿನ ರೈತರಿಗೆ ಪಾವತಿಸಬೇಕಾದ ಕನಿಷ್ಠ ಬೆಲೆಯಾಗಿದೆ.

 


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ