ರಾಯಚೂರು: ಶ್ರೀ ರಾಮಚಂದ್ರನ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಿನ್ನೆಲೆ ಜಿಲ್ಲೆಯ ದೇವದುರ್ಗ ಪಟ್ಟಣದಲ್ಲಿ ಉಂಟಾಗಿದ್ದ ಬಿಗುವಿನ ವಾತಾವರಣ ಆರೋಪಿಯ ಬಂಧನ ಹಿನ್ನೆಲೆ ಸದ್ಯ ಶಾಂತವಾಗಿದೆ.
ಜಹೀರ್ ಎಂಬ ಯುವಕ ಶ್ರೀರಾಮನ ಬಗ್ಗೆ ಅವಹೇಳನಕಾರಿ ವಾಟ್ಸಪ್ ಸ್ಟೇಟಸ್ ಹಾಕಿದ್ದ. ಇದರಿಂದ ಆಕ್ರೋಶಗೊಂಡ ನೂರಾರು ಜನ ಹಿಂದೂ ಪರ ಸಂಘಟನೆ ಕಾರ್ಯಕರ್ತರು ರಾತ್ರೋ ರಾತ್ರಿ ದೇವದುರ್ಗ ಪೊಲೀಸ್ ಠಾಣೆ ಮುಂದೆ ಜಮಾಯಿಸಿದ್ದರು. ಆರೋಪಿಯನ್ನ ಕೂಡಲೇ ಬಂಧಿಸುವಂತೆ ಆಗ್ರಹಿಸಿ ಹೆಚ್ಚು ಜನ ಸೇರಿದ್ದರಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.ದೂರು ಸ್ವೀಕರಿಸಿದ ಎರಡು ಗಂಟೆಗಳ ಅವಧಿಯಲ್ಲೇ ದೇವದುರ್ಗ ಪೊಲೀಸರು ಆರೋಪಿ ಜಹೀರ್ ನನ್ನ ಬಂಧಿಸಿ, ಗುಪ್ತ ಸ್ಥಳದಲ್ಲಿ ವಿಚಾರಣೆ ನಡೆಸಿದರು. ಆದ್ರೆ
ಬಂಧಿಸಿರುವ ಆರೋಪಿಯನ್ನ ತೋರಿಸುವಂತೆ ಕಾರ್ಯಕರ್ತರು ಪಟ್ಟು ಹಿಡಿದು ಮಧ್ಯ ರಾತ್ರಿವರೆಗೂ ಪೊಲೀಸ್ ಠಾಣೆಯ ಮುಂದೆ ಜಮಾಯಿಸಿದ್ದರು. ಆರೋಪಿಯ ಬಂಧನದ ಫೋಟೋ ಎಲ್ಲೆಡೆ ಓಡಾಡಿದ್ದರಿಂದ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ನೆರೆದಿದ್ದವರ ಮನವೊಲಿಸಿದ್ದರಿಂದ ವಾತಾವರಣ ತಿಳಿಯಾಗಿದೆ. ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದ ಪೊಲೀಸರು ಆರೋಪಿಯನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
Laxmi News 24×7