Breaking News

ಒಂದು ವರ್ಷ ವಾದರೂ ಇನ್ನೂ ಸಿಕ್ಕಿಲ್ಲ ಪರಿಹಾರ

Spread the love

ಬೆಳಗಾವಿ: ಕಳೆದ ವರ್ಷದ ನೆರೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ಪರಿಹಾರ ವಿತರಿಸುವಂತೆ ಆಗ್ರಹಿಸಿ ಮೂಡಲಗಿ ತಾಲೂಕಿ ಅರಭಾಂವಿ ಮತಕ್ಷೇತ್ರ ವ್ಯಾಪ್ತಿಯ ಅವರಾದಿ ಗ್ರಾಮದ  ನೆರೆ ಸಂತ್ರಸ್ತರು ಗುರುವಾರ ಪ್ರತಿಭಟನೆ ನಡೆಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.

ಕಳೆದ ವರ್ಷ ಭೀಕರ ಪ್ರವಾಹದಿಂದ ಅವರಾದಿ ಗ್ರಾಮದ ದಂಡಪ್ಪನವರ ತೋಟ, ದೊಂಬರ ತೋಟ,  ಉರಬಿ ತೋಟ, ಮಾಡಲಗಿಯವರ ತೋಟ ಸೇರಿ  ಸುಮಾರು 75  ಮನೆಗಳು ಹಾನಿಗೊಳಗಾಗಿವೆ.  ಸರ್ಕಾರ ಘೋಷಣೆ ಮಾಡಿದ 10 ಸಾವಿರ ಪರಿಹಾರ. ವರ್ಷ ಕಳೆದರು ನಮಗೆ ತಲುಪಿಲ್ಲ. ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಾಗಿಲ್ಲ. ಮತ್ತೆ ಇದೀಗ ಪ್ರವಾಹ ಭೀತಿ ಎದುರಾಗಿದ್ದು, ಕೂಡಲೇ ಪರಿಹಾರ ವಿತರಿಸುವಂತೆ ಸಂತ್ರಸ್ತರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಉದ್ದವ ಯಲ್ಲಪ್ಪ ಡೊಂಬರ, ಮುತ್ತಪ್ಪ ಡೊಂಬರ,  ಚನ್ನಪ್ಪ ಹುನ್ನೂರ,  ಲಕ್ಕಪ್ಪ ಗೇಟಿನ, ಹಾಲಪ್ಪ ದುಂಡಪ್ಪ ಗೇಟಿನ, ಹುಸೇನಸಾಬ ಬಾಗವಾನ್,  ಮಾನಿಂಗ ಕಾಸರ, ಚನ್ನಪ್ಪ ಹೋಳಿ, ಶಂಕರೆಪ್ಪ ಪಾಟೀಲ್ , ವಿನಯಕ ಬಾಗೇವಾಡಿ ಸೇರಿದಂತೆ ಮುಂತಾದವರು ಇದ್ದರು.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ