Breaking News

ಸೆ.21ರಿಂದ 30ರವರೆಗೆ ವಿಧಾನಮಂಡಲ ಅಧಿವೇಶನ..!

Spread the love

ಬೆಂಗಳೂರು,ಆ.20-ಕೋವಿಡ್ ಕಾರಣದಿಂದ ಮುಂದೂಡಿಕೆಯಾಗಿದ್ದ ವಿಧಾನಮಂಡಲದ ಮಳೆಗಾಲದ ಅವೇಶನ ಸೆಪ್ಟೆಂಬರ್ 21ರಿಂದ ಹತ್ತು ದಿನಗಳ ಕಾಲ ಬೆಂಗಳೂರುನಲ್ಲಿ ನಡೆಯಲಿದೆ.

ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸೆಪ್ಟೆಂಬರ್ 21ರಿಂದ 30ರವರೆಗೆ ಕಾಲ ಅವೇಶನ ನಡೆಸಲು ಸರ್ಕಾರ ತೀರ್ಮಾನಿಸಿದೆ.

ಈ ಹಿಂದೆ ಜೂನ್ ತಿಂಗಳಿನಲ್ಲಿ ಮಳೆಗಾಲದ ಅವೇಶನ ನಡೆಸಬೇಕಾಗಿತ್ತಾದರೂ ಕೋವಿಡ್ ಕಾರಣದಿಂದ ಮುಂದೂಡಿಕೆಯಾಗಿತ್ತು. ವಿಧಾನಸೌಧ ಹೊರತುಪಡಿಸಿ ನಗರದ ಅರಮನೆ ಮೈದಾನ ಸೇರಿದಂತೆ ಮತ್ತಿತರ ಕಡೆ ಸಭೆ ನಡೆಸಲು ಸ್ಥಳ ಗುರುತಿಸುವ ಕಾರ್ಯ ನಡೆಸಲಾಗಿತ್ತು.

ಅಂತಿಮವಾಗಿ ಕೆಲವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ವಿಧಾನಸೌಧದಲ್ಲಿ ನಡೆಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.
ಸಂಪುಟ ಸಭೆಯ ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.


Spread the love

About Laxminews 24x7

Check Also

ವೈಷ್ಣೋದೇವಿ ಯಾತ್ರೆಗೂ ಸರ್ಕಾರದಿಂದ ಸಹಾಯ ಧನ: ರಾಮಲಿಂಗಾರೆಡ್ಡಿ

Spread the loveಬೆಂಗಳೂರು: ಶ್ರೀ ಮಾತಾ ವೈಷ್ಣೋದೇವಿ ದೇವಾಲಯಕ್ಕೆ  ಭೇಟಿ ನೀಡುವ ಯಾತ್ರಿಗಳಿಗೆ ತಲಾ 5 ಸಾವಿರ ಸಹಾಯಧನ ಯೋಜನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ