Breaking News

ನಾಳೆಯಿಂದ ನಾವು ಕೆಲಸಕ್ಕೆ ಬರುವುದಿಲ್ಲ ಎಂದು ಮೈಸೂರು ಆರೋಗ್ಯ ಇಲಾಖೆ ವೈದ್ಯರು ಸುಧಾಕರ್‌ಗೆ ಎಚ್ಚರಿಕೆ

Spread the love

ಮೈಸೂರು: ಆತ್ಮಹತ್ಯೆ ಮಾಡಿಕೊಂಡ ನಂಜನಗೂಡಿನ ಟಿಹೆಚ್‍ಒ ಅವರ ಅಂತಿಮ ದರ್ಶನಕ್ಕೆ ಹೋಗಿದ್ದ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರಿಗೆ ಮಹಿಳಾ ವೈದ್ಯೆಯೊಬ್ಬರು ಸಖತ್ ಕ್ಲಾಸ್ ತೆಗೆದುಕೊಂಡಿದ್ದಾರೆ.ಆರೋಗ್ಯಾಧಿಕಾರಿ ನಾಗೇಂದ್ರ ಇಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದರು. ನಾಗೇಂದ್ರ ಅವರು ಮೈಸೂರಿನ ಆಲನಹಳ್ಳಿ ನಿವಾಸದಲ್ಲಿ ನೇಣಿಗೆ ಶರಣಾಗಿದ್ದರು. ಅವರು ಕಳೆದ ಒಂದು ವರ್ಷದಿಂದ ನಂಜನಗೂಡಿನಲ್ಲಿ ತಾಲೂಕು ಆರೋಗ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಕೆಲಸದ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ನಾಗೇಂದ್ರ ಅವರ ಅಂತಿಮ ದರ್ಶನ ಪಡೆಯಲು ಸುಧಾಕರ್ ಅವರು ಮೈಸೂರಿಗೆ ಹೋಗಿದ್ದರು. ಈ ವೇಳೆ ಸ್ಥಳದಲ್ಲಿ ಇದ್ದ ವೈದ್ಯೆಯೊಬ್ಬರು, 30 ಲಕ್ಷ ಪರಿಹಾರ ಕೊಡ್ತೀರಾ? ನಾವು ವೈದ್ಯರು ನಮ್ಮ ಒಂದು ತಿಂಗಳ ಸಂಬಳ ಕೊಡುತ್ತೇವೆ. ಆದೇ ಕೋಟ್ಯಂತರ ರೂ. ಆಗುತ್ತದೆ. ನೀವು ಹೊರಟು ಹೋಗಿ ಇಲ್ಲಿಂದ ಎಂದು ಸುಧಾಕರ್‌ಗೆ ವೈದ್ಯೆ ತರಾಟೆ ತೆಗೆದುಕೊಂಡರು. ವೈದ್ಯೆಗೆ ಉತ್ತರಿಸಲಾಗದ ಸುಧಾಕರ್ ಅವರು ಮೂಕ ಪ್ರೇಕ್ಷಕರಂತೆ ನಿಂತುಕೊಂಡಿದ್ದರು.

ನಮಗೆ ಐಎಎಸ್ ಅಧಿಕಾರಿಗಳ ಹಿಡಿತದಿಂದ ತಪ್ಪಿಸಿ. ಸಿಇಒ ಪ್ರಶಾಂತ್ ಕುಮಾರ್ ಮಿಶ್ರಾ ಅವರ ಮೇಲೆ ಕ್ರಿಮಿನಲ್ ಮೊಕದಮ್ಮೆ ದಾಖಲಿಸಿ. ಅವರನ್ನು ಅಮಾನತುಗೊಳಿಸಿ ಎಂದು ಸುಧಾಕರ್ ಅವರಿಗೆ ವೈದ್ಯರು ಒತ್ತಾಯ ಮಾಡಿದರು. ಇದೇ ವೇಳೆ ಮೃತ ನಾಗೇಂದ್ರ ಕೆಲಸ ನೆನೆದು ಡಾ. ರವೀಂದ್ರ ಅವರು ಕಣ್ಣೀರು ಹಾಕಿದರು. ಸಿಇಒ ಅನ್ನು ಅಮಾನತು ಮಾಡಿ ಪ್ರಕರಣ ದಾಖಲಿಸದಿದ್ದರೆ, ನಾಳೆಯಿಂದ ನಾವು ಕೆಲಸಕ್ಕೆ ಬರುವುದಿಲ್ಲ ಎಂದು ಮೈಸೂರು ಆರೋಗ್ಯ ಇಲಾಖೆ ವೈದ್ಯರು ಸುಧಾಕರ್‌ಗೆ ಎಚ್ಚರಿಕೆ ನೀಡಿದರು.

 

 


Spread the love

About Laxminews 24x7

Check Also

ಕೇವಲ 1 ಗಂಟೆ ಅವಧಿಯಲ್ಲಿ ಎರಡು ಖಾತೆಗಳಿಂದ 19.30 ಲಕ್ಷ ಮಂಗಮಾಯ..!

Spread the loveಮೈಸೂರು:ಕೇವಲ 1 ಗಂಟೆ ಅವಧಿಯಲ್ಲಿ ಎರಡು ಖಾತೆಗಳಿಂದ ಖದೀಮರು 19.30 ಲಕ್ಷ ಲಪಟಾಯಿಸಿ ವಂಚಿಸಿರುವ ಪ್ರಕರಣ ಸೆನ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ