Breaking News

ಜಿಂಕೆಗೆ ಡಿಕ್ಕಿ ಹೊಡೆದ ಬೈಕ್ ಸವಾರ ಆಸ್ಪತ್ರೆ ಸೇರಿದ್ದು ಹೇಗೆ..?

Spread the love

ಕೋಲಾರ : ಬೈಕ್ ನಲ್ಲಿ ಚಲಿಸುತ್ತಿದ್ದಾಗ ಅಡ್ಡಬಂದ ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ ಜಿಂಕೆ ಸ್ಥಳದಲ್ಲೆ ಸಾವನ್ನಪ್ಪಿ ಬೈಕ್ ಸವಾರನಿಗೆ ತೀವ್ರ ಗಾಯಗಳಾಗಿರುವ ಘಟನೆ ಕೋಲಾರ ಜಿಲ್ಲೆಯ ಹುಲ್ಲುಂಕಲ್ಲು ಗ್ರಾಮದಲ್ಲಿ ನಡೆದಿದೆ.

ಕೋಲಾರ ಜಿಲ್ಲೆಯ ಕಲ್ಕೆರೆ ಗ್ರಾಮದ ನಿವಾಸಿ ದೇವರಾಜ್ (50) ಹುಲ್ಲುಂಕಲ್ಲು ಗ್ರಾಮದ ಮೂಲಕವಾಗಿ ಬೈಕ್ ಚಾಲನೆ ಮಾಡುತ್ತಿರುವಾಗ ಏಕಾಏಕಿ ರಸ್ತೆ ಮಧ್ಯೆ ಜಿಂಕೆ ನುಗ್ಗಿ ಬಂದಿದ್ದು ಬೈಕನ್ನು ನಿಯಂತ್ರಣ ಮಾಡಲಾಗದೆ ನೇರವಾಗಿ ಜಿಂಕೆಗೆ ಡಿಕ್ಕಿ ಹೊಡೆದಿದ್ದಾರೆ. ಸ್ಥಳದಲ್ಲೆ ಜಿಂಕೆಯು ಸಾವನ್ನಪ್ಪಿದ್ದು, ತೀವ್ರವಾಗಿ ಗಾಯಗೊಂಡಿದ್ದ ದೇವರಾಜು ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈ ಘಟನೆ ವೇಮಗಲ್ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೋಲಿಸರು ತನಿಖೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ