Breaking News
Home / new delhi / ಘಟಪ್ರಭಾ, ಮಲಪ್ರಭಾ ಜಲಾಶಯಗಳ ಹೊರಹರಿವು ಇಳಿಕೆ

ಘಟಪ್ರಭಾ, ಮಲಪ್ರಭಾ ಜಲಾಶಯಗಳ ಹೊರಹರಿವು ಇಳಿಕೆ

Spread the love

ಬೆಳಗಾವಿ: ಜಿಲ್ಲೆಯಂತೆ ನೆರೆಯ ದಕ್ಷಿಣ ಮಹಾರಾಷ್ಟ್ರದಲ್ಲೂ ಶುಕ್ರವಾರ ಮಳೆಯ ಅಬ್ಬರ ಕಡಿಮೆಯಾಗಿದೆ. ಅಲ್ಲಿಂದ ಕೃಷ್ಣಾ ನದಿಗೆ ಹರಿದು ಬರುತ್ತಿದ್ದ ಒಳಹರಿವು ತೀವ್ರ ಗತಿಯಲ್ಲಿ ಕಡಿಮೆಯಾಗಿದೆ. 1.73 ಲಕ್ಷ ಕ್ಯುಸೆಕ್‌ ನೀರು ಹರಿದು ಬಂದಿದ್ದು, ಹಿಂದಿನ ದಿನಕ್ಕೆ ಹೋಲಿಸಿದರೆ 25 ಸಾವಿರ ಕ್ಯುಸೆಕ್‌ ಕಡಿಮೆಯಾಗಿದೆ.

ಇದೇ ರೀತಿ, ಘಟಪ್ರಭಾ ಹರಿವು ಕೂಡ ಕಡಿಮೆಯಾಗಿದೆ. 19,775 ಕ್ಯುಸೆಕ್‌ ಒಳಹರಿವು ಇದೆ. ಹಿಂದಿನ ದಿನ 31,627 ಕ್ಯುಸೆಕ್‌ ಇತ್ತು. ಹಿಡಕಲ್‌ ಬಳಿಯ ಜಲಾಶಯದಿಂದ ಹೊರಬಿಡುವ ನೀರಿನ ಪ್ರಮಾಣದಲ್ಲೂ ಗಣನೀಯವಾಗಿ ಇಳಿಕೆಯಾಗಿದೆ. 35 ಸಾವಿರ ಕ್ಯುಸೆಕ್‌ನಷ್ಟಿದ್ದ ಹೊರಹರಿವು, 12 ಸಾವಿರಕ್ಕೆ ಇಳಿದಿದೆ.

ಮಲಪ್ರಭಾ ನದಿಯ ಒಳಹರಿವಿನಲ್ಲಿ ಕೊಂಚ ಏರಿಕೆಯಾಗಿದೆ. ನಿನ್ನೆ 5,644 ಕ್ಯುಸೆಕ್‌ ಇದ್ದ ಪ್ರಮಾಣವು 9,720 ಕ್ಯುಸೆಕ್‌ಗೆ ಏರಿಕೆಯಾಗಿದೆ.

ಸವದತ್ತಿ ಬಳಿ ನದಿಗೆ ನಿರ್ಮಿಸಲಾಗಿರುವ ನವಿಲುತೀರ್ಥ ಜಲಾಶಯದಿಂದ ಹೊರಬಿಡುವ ನೀರಿನ ಪ್ರಮಾಣದಲ್ಲಿ ಇಳಿಕೆಯಾಗಿದೆ. 2,264 ಕ್ಯುಸೆಕ್‌ ನೀರು ಹೊರಬಿಡಲಾಗಿದೆ. ಕಳೆದ ಕೆಲವು ದಿನಗಳಿಂದ ಪ್ರವಾಹದ ಭೀತಿ ಎದುರಿಸುತ್ತಿದ್ದ ನದಿ ದಂಡೆಯ ಗ್ರಾಮಗಳು ನಿರಾಳವಾಗಿವೆ.

ಜಲಾಶಯಗಳ ನೀರಿನ ಮಟ್ಟ

ಜಲಾಶಯ ಗರಿಷ್ಠ ಮಟ್ಟ ಇಂದಿನ ಮಟ್ಟ ಒಳಹರಿವು ಹೊರಹರಿವು
ಮಲಪ್ರಭಾ 2,079.50 2,077.25 9,720 2,264
ಘಟಪ್ರಭಾ 2,175

Spread the love

About Laxminews 24x7

Check Also

ಎಸ್‌ಐಟಿ ತನಿಖೆಯಲ್ಲಿ ಸರ್ಕಾರ ಮಧ್ಯ ಪ್ರವೇಶ ಮಾಡಲ್ಲ ಎಂದ ಸಿಎಂ

Spread the loveಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಆರೋಪಗಳ ಬಗ್ಗೆ ಎಸ್‌ಐಟಿ ನಡೆಸುತ್ತಿರುವ ತನಿಖೆಯಲ್ಲಿ ಸರ್ಕಾರ ಯಾವುದೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ