Breaking News

ರಾಜ್ಯಕಾರಣದಲ್ಲಿ ಸದ್ದು ಮಾಡಿದ ಫೋನ್ ಟ್ಯಾಪ್

Spread the love

ಬೆಂಗಳೂರು,  : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಫೋನ್ ಟ್ಯಾಪ್ ಆಗಿದೆ ಎಂಬ ಗಂಭೀರ ಆರೋಪವನ್ನು ಮಾಡಿದ್ದಾರೆ.

ಇಂದು (ಶುಕ್ರವಾರ) ಮಾತನಾಡಿರುವ ಅವರು, ನನ್ನ ಫೋನ್ ಟ್ಯಾಪ್ ಆಗಿದೆ. ಟ್ಯಾಪ್ ಮಾಡಿರುವ ಬಗ್ಗೆ ದೂರು ದಾಖಲಿಸುತ್ತೇನೆ. ನಿನ್ನೆಯಿಂದ ಕರೆಗಳೇ ಬರುತ್ತಿಲ್ಲ, ಹೋಗುತ್ತಿಲ್ಲ. ಶೇಕಡ 100 ರಷ್ಟು ಫೋನ್ ಟ್ಯಾಪ್ ಆಗಿದೆ ಎಂದು ಆರೋಪಿಸಿದರು.

ನಿರ್ಮಲಾನಂದ ಸ್ವಾಮೀಜಿಯ ಫೋನ್ ಟ್ಯಾಪ್: ಅಶೋಕ್ ಕ್ಷಮೆ ಪ್ರಶ್ನಿಸಿದ ಕುಮಾರಸ್ವಾಮಿ

ನಮ್ಮ ಸುದರ್ಶನ್ 25 ಕಾಲ್ ಮಾಡಿದ್ದಾರೆ, ಆದರೆ ಒಮ್ಮೆಯೂ ನನಗೆ ಕಾಲ್ ಬಂದಿಲ್ಲ. ಪಾಪ ಏನು ಬೇಕೋ ಅವರು ಮಾಡಿಕೊಳ್ಳಲಿ. ಆದರೆ ನನ್ನ ಫೋನ್‌ ಟ್ಯಾಪಿಂಗ್ ಆಗುತ್ತಿರುವುದು ನಿಜ. ಹಿಂದೆಯೂ ಆಗುತ್ತಿತ್ತು,ಈಗ ಮತ್ತೆ ಆಗುತ್ತಿದೆ ಎಂದರು.

ಡಿಕೆಶಿ ಅವರ ಈ ಆರೋಪಕ್ಕೆ ಪ್ರತಿಕ್ರಿಯಿಸಿದ ಕಂದಾಯ ಸಚಿವ ಆರ್.

ಅಶೋಕ್, ಫೋನ್ ಟ್ಯಾಪ್ ಮಾಡುವ ಅಭ್ಯಾಸ, ಅವಶ್ಯಕತೆ ನಮ್ಮ ಸರ್ಕಾರಕ್ಕಿಲ್ಲ ಎಂದು ತಿರುಗೇಟು ನೀಡಿದರು.

ಹಿಂದೆ ಅವರದೇ ಸರ್ಕಾರ ಇದ್ದಾಗ ಫೋನ್ ಟ್ಯಾಪ್ ಆಗಿದ್ದು ಗೊತ್ತಿದೆ. ಹಿಂದಿನ ಸರ್ಕಾರದ ಫೋನ್ ಟ್ಯಾಪ್ ತನಿಖೆ ಒಂದು ಹಂತಕ್ಕೆ ಬರುತ್ತಿದೆ.
ಯಾರಿಗೆ ಫೋನ್ ಟ್ಯಾಪ್ ಮಾಡಿ ಅನುಭವ ಇದೆಯೋ, ಯಾವ ಸರ್ಕಾರ ಹಿಂದೆ ಫೋನ್ ಟ್ಯಾಪ್ ಮಾಡಿತ್ತೋ ಅವರೇ ಈಗ ಟ್ಯಾಪಿಂಗ್ ಬಗ್ಗೆ ಮಾತಾಡುತ್ತಿರೋದು ಆಶ್ಚರ್ಯವಾಗಿದ್ದು, ಭೂತದ ಬಾಯಲ್ಲಿ ಭಗದ್ಗೀತೆ ಹೇಳಿದಂತೆ ಕಾಣಿಸುತ್ತಿದೆ ಎಂದು ವ್ಯಂಗ್ಯವಾಡಿದರು.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ