Breaking News

ಹಳೆ ವೈಷಮ್ಯಕ್ಕೆ ಕಲಬುರಗಿಯಲ್ಲಿ ಯುವಕ ಬಲಿಯಾದ

Spread the love

ಹಳೆ ವೈಷಮ್ಯದ ಹಿನ್ನೆಲೆಯಲ್ಲಿ 23 ವರ್ಷ ವಯಸ್ಸಿನ ಯುವಕನೊಬ್ಬನನ್ನು ಹಾಡುಹಗಲೇ ಚಾಕುವಿನಿಂದ ಬರ್ಬರವಾಗಿ ಇರಿದು ಕೊಲೆ ಮಾಡಿರುವ ಕೃತ್ಯ ಕಲಬುರಗಿ ನಗರದ ಪಬ್ಲಿಕ್ ಗಾರ್ಡನ್ ಮುಂಭಾಗದಲ್ಲಿ ನಡೆದಿದೆ . ಯುವಕನನ್ನು ನಗರದ ರಾಣೇಶ್ ಪೀರ್ ದರ್ಗಾ ಬಡಾವಣೆ ನಿವಾಸಿ ವಿರೇಶ್ ಕಡಗಂಚಿ ಎಂದು ಗುರುತಿಸಲಾಗಿದೆ .

ಪಲ್ಸರ್ ಬೈಕ್​ನಲ್ಲಿ ಬಂದ ಮೂವರು ಹಂತಕರು ಕೃತ್ಯವೆಸಗಿ ಕ್ಷಣಾರ್ಧದಲ್ಲೇ ಪರಾರಿಯಾಗಿದ್ದಾರೆ . ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ವಿರೇಶ್​ನನ್ನು ಅಂಬ್ಯಲೆನ್ಸ್​ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ , ಅಲ್ಲಿ ದಾಖಲಿಸುವ ಮುನ್ನವೇ ಕೊನೆಯುಸಿರೆಳದನೆಂದು ಪೊಲೀಸ್ ಮೂಲಗಳು ತಿಳಿಸಿವೆ .

ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಹಂತಕರನ್ನು ಬಂಧಿಸಲು ಜಾಲ ಬೀಸಲಾಗಿದೆ


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ