Breaking News

ಕೃಷ್ಣಾ ನದಿಯಲ್ಲಿ ನಾಪತ್ತೆಯಾಗಿದ್ದ ನಾಲ್ವರು ಶವವಾಗಿ ಪತ್ತೆ……….

Spread the love

ರಾಯಚೂರು: ಆಗಸ್ಟ್ 17ರಂದು ಕೃಷ್ಣ ನದಿಯಲ್ಲಿ ತೆಪ್ಪ ಮುಳುಗಿ ನಾಪತ್ತೆಯಾಗಿದ್ದ ರಾಯಚೂರಿನ ನಡುಗಡ್ಡೆ ಗ್ರಾಮ ಕುರ್ವಕಲಾದ ನಾಲ್ಕು ಜನ ಕೊನೆಗೆ ಶವವಾಗಿ ಪತ್ತೆಯಾಗಿದ್ದಾರೆ.ತೆಲಂಗಾಣದ ಪಂಚದೇವಪಾಡಗೆ ದಿನಸಿ ತರಲು ಹೋಗಿದ್ದವರು ಕುರ್ವಾಕುಲಕ್ಕೆ ಮರಳುವಾಗ ತೆಪ್ಪ ಮುಳುಗಿತ್ತು. ಮೊದಲಿಗೆ ಇಬ್ಬರು, ಬಳಿಕ ಒಬ್ಬರು ಒಟ್ಟು ಮೂರು ಜನ ತೆಲಂಗಾಣದ ಜುರಾಲಾ ಇಂದಿರಾ ಪ್ರಿಯದರ್ಶಿನಿ ಜಲಾಶಯದ ಬಳಿ ಶವವಾಗಿ ಪತ್ತೆಯಾಗಿದ್ದರು. ಇಂದು ಬಾಲಕಿ ರೋಜಾ ಸಹ ಜಲಾಶಯ ಬಳಿ ಶವವಾಗಿ ದೊರಕಿದ್ದಾಳೆ.

ಸುಮಲತಾ, ನರಸಮ್ಮ, ಪಾರ್ವತಿ ಹಾಗೂ ರೋಜಾ ಪತ್ತೆಗಾಗಿ ಎನ್.ಡಿ.ಆರ್.ಎಫ್, ಅಗ್ನಿ ಶಾಮಕ ದಳ ಸತತ ಕಾರ್ಯಾಚರಣೆ ನಡೆಸಿದ್ದರು ಸುಳಿವು ಪತ್ತೆಯಾಗಿರಲಿಲ್ಲ. ಎಲ್ಲ ನಾಲ್ಕು ಜನ ಕೊನೆಗೆ ಶವವಾಗಿ ಪತ್ತೆಯಾಗಿದ್ದಾರೆ. ನಿನ್ನೆವರೆಗೆ ಕೃಷ್ಣ ನದಿಯಲ್ಲಿ ನಾಪತ್ತೆಯಾಗಿದ್ದವರಲ್ಲಿ ಮೂವರ ಶವ ಪತ್ತೆ ಹಿನ್ನೆಲೆ ಮೂವರ ಕುಟುಂಬಕ್ಕೆ ಜಿಲ್ಲಾಡಳಿತ ತಲಾ 5 ಲಕ್ಷ ಪರಿಹಾರ ನೀಡಿದೆ. ಸುಮಲತಾ, ಪಾರ್ವತಿ, ನರಸಮ್ಮ ಕುಟುಂಬಕ್ಕೆ ಒಟ್ಟು 15 ಲಕ್ಷ ಪರಿಹಾರ ನೀಡಲಾಗಿದೆ.


Spread the love

About Laxminews 24x7

Check Also

ತುಂಗಭದ್ರಾ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ದುರ್ಮರಣ

Spread the loveರಾಯಚೂರು: ತುಂಗಭದ್ರಾ ನದಿಗೆ  ಸ್ನಾನಕ್ಕೆ ತೆರಳಿದ್ದ ನಾಲ್ವರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ  ಕೊಸಗಿ ಮಂಡಲದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ