ನವದೆಹಲಿ : ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದ ಇಬ್ಬರು ಕಾಂಗ್ರೆಸ್ ನಾಯಕರಿಗೆ ಎಐಸಿಸಿಯಲ್ಲಿ ಉನ್ನತ ಹುದ್ದೆ ನೀಡಲು ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ.
ರಾಜ್ಯ ಕಾಂಗ್ರೆಸ್ ನಾಯಕರಾದ ಕೆ.ಹೆಚ್. ಮುನಿಯಪ್ಪ ಹಾಗೂ ಹೆಚ್.ಕೆ.ಪಾಟೀಲ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಎಐಸಿಸಿಯಲ್ಲಿ ಉನ್ನತ ಹುದ್ದೆ ನೀಡಲು ಮುಂದಾಗಿದೆ ಎನ್ನಲಾಗಿದ್ದು, ಹೆಚ್.ಕೆ.ಪಾಟೀಲ್ ಅವರಿಗೆ ಸಿಡಬ್ಲ್ಯೂಸಿಯಲ್ಲಿ ಸ್ಥಾನ ನೀಡುವ ಸಾಧ್ಯತೆ ಇದ್ದು, ಕೆ.ಹೆಚ್. ಮುನಿಯಪ್ಪ ಅವರಿಗೆ ಎಸ್ಸಿ ವಿಭಾಗದ ರಾಷ್ಟ್ರೀಯ ಅಧ್ಯಕ್ಷ ಸ್ಥಾನ ಸಿಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.