ಗದಗ: ಮುಂಡರಗಿ ತಾಲ್ಲೂಕು ವೈದ್ಯಾಧಿಕಾರಿಗೆ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಬೆಂಗಳೂರಿನ ಸ್ಪರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವು ಭರಿಸಲಿದೆ ಎಂದು ಗದಗ ಜಿಲ್ಲೆ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ತಿಳಿಸಿದ್ದಾರೆ.
ಈ ಕುರಿತು ಸಚಿವರು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಜಾವಿದ್ ಅಕ್ತರ್ ಅವರೊಂದಿಗೆ ಮಾತನಾಡಿದ್ದು, ಅವರು ಸ್ಪರ್ಶ ಆಸ್ಪತ್ರೆಯ ಮುಖ್ಯಸ್ಥರೊಂದಿಗೆ ಈಗಾಗಲೇ ಮಾತನಾಡಿದ್ದು, ಸರ್ಕಾರವು ಚಿಕಿತ್ಸೆ ವೆಚ್ಚ ಪಾವತಿಸಲಿದೆ.
ಸರ್ಕಾರವು ಕೊರೊನಾ ವಾರಿಯರ್ಸ್ ಜೊತೆಗೆ ಇರಲಿದೆ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ತಿಳಿಸಿದ್ದಾರೆ.
Laxmi News 24×7