Breaking News

10 ತರಗತಿ ಪೂರಕ ಪರೀಕ್ಷೆ ವೇಳಾಪಟ್ಟಿಯನ್ನು ಪ್ರಕಟಿಸಿದೆ.

Spread the love

ಬೆಂಗಳೂರು: ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅನುತ್ತೀರ್ಣಗೊಂಡ ಹಾಗೂ ಕೊರೊನಾ ಕಾರಣಕ್ಕೆ ಪರೀಕ್ಷೆ ಬರೆಯದಿರುವ ಅಭ್ಯರ್ಥಿಗಳಿಗಾಗಿ ಪೂರಕ ಪರೀಕ್ಷೆ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಕೊರೊನಾ ಕಾರಣಕ್ಕೆ ಪರೀಕ್ಷೆ ಬರೆಯದಿರುವ ಅಭ್ಯರ್ಥಿಗಳಿಗೆ ಇದು ಪ್ರಥಮ ಪ್ರಯತ್ನ ಎಂದು ಪರಿಗಣಿಸಲಾಗುತ್ತಿದ್ದು, ಅಂಥವರು ಹೊಸದಾಗಿ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಅನುತ್ತೀರ್ಣಗೊಂಡ ಅಭ್ಯರ್ಥಿಗಳು ಪರೀಕ್ಷೆಗೆ ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಬೇಕಾಗುತ್ತದೆ. ಪರೀಕ್ಷೆಗಳು ಬೆಳಗ್ಗೆ 10.30 ರಿಂದ ಆರಂಭವಾಗಲಿದ್ದು, ವೇಳಾಪಟ್ಟಿ ಈ ಕೆಳಗಿನಂತಿದೆ.

ಸೆಪ್ಟಂಬರ್ 21 – ಗಣಿತ, ಸಮಾಜಶಾಸ್ತ್ರ, ಸೆಪ್ಟೆಂಬರ್ 22 – ಪ್ರಥಮ ಭಾಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ), ಸೆಪ್ಟೆಂಬರ್ 23 – ಸಮಾಜಶಾಸ್ತ್ರ, ಸೆಪ್ಟೆಂಬರ್ 24 – ದ್ವಿತೀಯ ಭಾಷೆ (ಇಂಗ್ಲಿಷ್, ಕನ್ನಡ), ಸೆಪ್ಟೆಂಬರ್ 25 – ತೃತಿಯ ಭಾಷೆ (ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್ ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು) ಎನ್‌ಎಫ್ ಕ್ಯೂ ಆಫ್ ಪರೀಕ್ಷೆಗಳು, ಸೆಪ್ಟೆಂಬರ್ 26 – ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್, ಎಲಿಮೆಂಟ್ಸ್ ಆಫ್ ಇಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್, ಗ್ರಾಫಿಕ್ಸ್, ಅರ್ಥಶಾಸ್ತ್ರ, ಸೆಪ್ಟೆಂಬರ್ – 28 ಬೆಳಿಗ್ಗೆ ವಿಜ್ಞಾನ, ರಾಜ್ಯಶಾಸ್ತ್ರ, ಮಧ್ಯಾಹ್ನ ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ, ಸೆಪ್ಟೆಂಬರ್ 29 ಜೆಟಿಎಸ್ ಪ್ರಾಯೋಗಿಕ ಪರೀಕ್ಷೆ ನಡೆಯಲಿದೆ.


Spread the love

About Laxminews 24x7

Check Also

ನೀಟ್ ವ್ಯವಸ್ಥೆ ರಾಜ್ಯದಲ್ಲಿ ರದ್ದು ಮಾಡೋದಿಲ್ಲ: ಶರಣ ಪ್ರಕಾಶ್ ಪಾಟೀಲ್

Spread the loveಬೆಂಗಳೂರು: ಮೆಡಿಕಲ್ ಸೀಟು ಹಂಚಿಕೆಯಲ್ಲಿ ನೀಟ್ ವ್ಯವಸ್ಥೆ ರಾಜ್ಯದಲ್ಲಿ ರದ್ದು ಮಾಡೋದಿಲ್ಲ ಅಂತ ವೈದ್ಯಕೀಯ ಶಿಕ್ಷಣ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ