Breaking News

30 ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

Spread the love

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 30 ಲಕ್ಷದ ಗಡಿ ದಾಟಿದೆ. ಶನಿವಾರ 69,239 ಮಂದಿಗೆ ಸೋಂಕು ತಗುಲಿದ್ದು, ಕೊರೊನಾ ತನ್ನೆಲ್ಲ ಹಿಂದಿನ ದಾಖಲೆಗಳ ಬ್ರೇಕ್ ಮಾಡಿದೆ. ಕಳೆದ 24 ಗಂಟೆಯಲ್ಲಿ ಕೊರೊನಾದಿಂದಾಗಿ ಒಟ್ಟು 912 ಜನರು ಸಾವನ್ನಪ್ಪಿದ್ದು, ಒಟ್ಟು ಮೃತರ ಸಂಖ್ಯೆ 56,706ಕ್ಕೆ ಏರಿಕೆಯಾಗಿದೆ.

ಸದ್ಯ 7,07,668 ಸಕ್ರಿಯ ಪ್ರಕರಣಗಳಿದ್ದು, ಒಟ್ಟು ಸೋಂಕಿತರ ಸಂಖ್ಯೆ 30,44,941ಕ್ಕೆ ಏರಿಕೆಯಾಗಿದೆ. ಕೊರೊನಾದಿಂದ ಗುಣಮುಖ ಪ್ರಮಾಣ ಶೇ.74.89ರಷ್ಟಿದೆ. ಕಳೆದ 15 ದಿನದಲ್ಲಿಯೇ 20 ಲಕ್ಷ ಪ್ರಕರಣಗಳು ವರದಿಯಾಗಿವೆ. ಬ್ರೆಜಿಲ್ ಮತ್ತು ಅಮೆರಿಕಾದ ನಂತರದ ಸ್ಥಾನಲದಲ್ಲಿಯೇ ಭಾರತ ಇದೆ. ಆಗಸ್ಟ್ 22ರಂದು ಒಟ್ಟು 8,01,147 ಸ್ಯಾಂಪಲ್ ಟೆಸ್ಟ್ ಮಾಡಲಾಗಿದೆ.ಮಹಾರಾಷ್ಟ್ರ (6,71,942), ತಮಿಳುನಾಡು (3,73,410), ಆಂಧ್ರಪ್ರದೇಶ (3,45,216), ಕರ್ನಾಟಕ (2,71,876) ಮತ್ತು ಉತ್ತರ ಪ್ರದೇಶ (1,82,453) ರಾಜ್ಯಗಳು ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮೊದಲ ಐದು ಸ್ಥಾನದಲ್ಲಿವೆ.


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ