Breaking News

ಪೊಲೀಸ್ ಕಾನ್ ಸ್ಟೇಬಲ್ ಒಬ್ಬರು ಪವರ್ ಆಫ್ ಪಾಕಿಸ್ತಾನ್ ಎಂಬ ಪೇಜ್ ಲೈಕ್ ಮಾಡಿ ವಾಟ್ಸ್ ಆಪ್ ಗ್ರೂಪ್ ನಲ್ಲಿ ಆ ಪೇಜ್ ಲೈಕ್. ಪಾಕ್ ಪರ ಪೋಸ್ಟ್ ಮಾಡಿದ್ದ ಪೊಲೀಸ್ ಪೇದೆಯನ್ನು ಅಮಾನತು.

Spread the love

ದಾವಣಗೆರೆ : ಜಿಲ್ಲೆಯ ಸಶಸ್ತ್ರ ಮೀಸಲು ಪಡೆಯಲ್ಲಿ ಪೊಲೀಸ್ ಕಾನ್ ಸ್ಟೇಬಲ್ ಒಬ್ಬರು ಪವರ್ ಆಫ್ ಪಾಕಿಸ್ತಾನ್ ಎಂಬ ಪೇಜ್ ಲೈಕ್ ಮಾಡಿದ್ದಲ್ಲದೇ, ವಾಟ್ಸ್ ಆಪ್ ಗ್ರೂಪ್ ನಲ್ಲಿ ಆ ಪೇಜ್ ಲೈಕ್ ಮಾಡುವಂತೆ ಶೇರ್ ಮಾಡಿದ್ದರು. ಈ ಮೂಲಕ ಸಾರ್ವಜನಿಕರ ಆಕ್ರೋಶಕ್ಕೆ ತುತ್ತಾಗಿದ್ದರು. ಇಂತಹ ಪಾಕ್ ಪರ ಪೋಸ್ಟ್ ಮಾಡಿದ್ದ ಪೊಲೀಸ್ ಪೇದೆಯನ್ನು ಅಮಾನತುಗೊಳಿಸಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಹೊರಡಿಸಿದ್ದಾರೆ.

2008ನೇ ಸಾಲಿನಲ್ಲಿ ಕಾನ್ ಸ್ಟೇಬಲ್ ಹುದ್ದೆಗೆ ಆಯ್ಕೆಯಾಗಿದ್ದಂತ ಸನಾವುಲ್ಲಾ ಎಂಬ ಪೊಲೀಸ್ ಪೇದೆಯೇ ಪಾಕ್ ಪರ ಪೇಜ್ ಲೈಕ್ ಮಾಡಿ, ವಾಟ್ಸ್ ಆಪ್ ಗ್ರೂಪ್ ನಲ್ಲಿ ಶೇರ್ ಮಾಡಿ, ಅಮಾನತುಗೊಂಡಿರುವ ಪೇದೆಯಾಗಿದ್ದಾರೆ.

ಪೊಲೀಸ್ ಪೇದೆ ಸನಾವುಲ್ಲ ಇದೇ ಮೊದಲ ಬಾರಿಗೇನು ಅಮಾನತುಗೊಂಡಿಲ್ಲ.

ಈ ಹಿಂದೆ 2014ರಲ್ಲಿ ಮುಸ್ಲೀಂ ಹುಡುಗಿಯೊಬ್ಬಳು ಅನ್ಯ ಕೋಮಿನ ಹುಡುಗನ ಜೊತೆಗೆ ಓಡಾಡುತ್ತಿದ್ದಾಳೆ ಎಂಬ ಕಾರಣಕ್ಕೆ ಅನ್ಯ ಕೋಮಿನ ಹುಡುಗನ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿಯೂ ಅಮಾನತುಗೊಂಡಿದ್ದರು.

ಇದೀಗ ಪಾಕ್ ಪರ ಪೇಜ್ ಲೈಕ್ ಮಾಡಿದ್ದಲ್ಲದೇ, ಶೇರ್ ಮಾಡಿದ್ದರ ಕಾರಣದಿಂದಾಗಿ ಆತನನ್ನು ಅಮಾನತುಗೊಳಿಸಿರುವುದಾಗಿ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನಮಂತರಾಯ ತಿಳಿಸಿದ್ದಾರೆ. ಜೊತೆಗೆ ಪ್ರಕರಣ ಸಂಬಂಧ ತನಿಖೆ ನಡೆಸಲಾಗುತ್ತದೆ. ಶೀಘ್ರವೇ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.


Spread the love

About Laxminews 24x7

Check Also

ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಸಮಗ್ರ ಸಿದ್ಧತೆ:D.C.

Spread the loveಬೆಳಗಾವಿ: ರಾಜ್ಯಾದ್ಯಂತ ಮಾರ್ಚ್ 21 ರಿಂದ ಏಪ್ರಿಲ್ 04 ರವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲಿದ್ದು, ಜಿಲ್ಲೆಯಲ್ಲಿ ಪರೀಕ್ಷೆಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ