ಬೆಂಗಳೂರು: ಸಿಎಂ ಮನವೊಲಿಕೆ ಹಿನ್ನೆಲೆ ನಂಜನಗೂಡು ಟಿಹೆಚ್‍ಒ ಆತ್ಮಹತ್ಯೆ ಪ್ರಕರಣ ಸಂಬಂಧ ಎರಡು ದಿನಗಳಿಂದ ಮೈಸೂರಿನಲ್ಲಿ ನಡೆಸುತ್ತಿದ್ದ ಪ್ರತಿಭಟನೆಯನ್ನು ವೈದ್ಯಾಧಿಕಾರಿಗಳು ಹಿಂಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವರು ವೈದ್ಯರಿಗೆ ಧನ್ಯವಾದ ಅರ್ಪಿಸಿದ್ದಾರೆ.
ಸಚಿವ ಡಾ. ಸುಧಾಕರ್, ಶ್ರೀರಾಮುಲು ಮತ್ತು ಸಿಎಂ ಪುತ್ರ ವಿಜಯೇಂದ್ರ ಪ್ರತಿಭಟನೆ ಹಿಂಪಡೆದಿದ್ದಕ್ಕೆ ವೈದ್ಯರಿಗೆ ಟ್ವೀಟ್ ಮಾಡುವ ಮೂಲಕ ಧನ್ಯವಾದ ತಿಳಿಸಿದ್ದಾರೆ. ಕೋವಿಡ್ ಸಂದರ್ಭದಲ್ಲಿ ವೈದ್ಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ರಾಜ್ಯ ಸರ್ಕಾರಕ್ಕೆ ಅರಿವಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ವೈದ್ಯರ ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿರುವ ಹಿನ್ನೆಲೆಯಲ್ಲಿ, ನೆನ್ನೆ ಕರೆ ನೀಡಲಾಗಿದ್ದ ಮುಷ್ಕರ ವಾಪಸ್ ಪಡೆದಿರುವ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘಕ್ಕೆ ಧನ್ಯವಾದಗಳು” ಎಂದು ಸುಧಾಕರ್ ಟ್ವೀಟ್ ಮಾಡಿದ್ದಾರೆ.
Laxmi News 24×7